Site icon PowerTV

ಕಾವೇರಿ ವಿವಾದ: ಬಿಎಸ್​ ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟನೆ!

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ರಾಜ್ಯದ ಹಲವೆಡೆ ಇಂದು ಪ್ರತಿಭಟನೆಗಳ ನಡೆಯುತ್ತಿದ್ದು ಬೆಂಗಳೂರಿನ ವಿವಿಧ ಭಾಗಗಳಲ್ಲಿ ಪ್ರತಿಭಟನೆ ಕಾವು ಬೀರುಸುಗೊಂಡಿದೆ.

ರಾಜ್ಯ ಬಿಜೆಪಿ ನಾಯಕರು ಇಂದು ನಗರದ ಸ್ವತಂತ್ರ್ಯ ಉದ್ಯಾನವನ, ಮೈಸೂರು ಬ್ಯಾಂಕ್ ವೃತ್ತ ಮತ್ತು ಆನೇಕಲ್​ ಗಡಿಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿವೆ. ಕಾವೇರಿ ನೀರಿಗಾಗಿ ಸರ್ಕಾರದ ವಿರುದ್ಧ ಬಿಜೆಪಿ ನಾಯಕರ ಹೋರಾಟ ನಡೆಸುತ್ತಿದ್ದು ‘ಕಾವೇರಿ ಉಳಿಸಿ, ಕಾಂಗ್ರೆಸ್‌ ಸರ್ಕಾರ ತೊಲಗಿಸಿ’ ಎಂಬ ಕೂಗು ಪ್ರತಿಭಟನಾ ಸ್ಥಳದಲ್ಲಿ ಕೇಳಿಬರುತ್ತಿದೆ.

ಇದನ್ನೂ ಓದಿ: ಮಂಡ್ಯದಲ್ಲಿ ಬುಗಿಲೆದ್ದ ಕಾವೇರಿ ಕಿಚ್ಚು : ಮಂಡ್ಯ ಮದ್ದೂರು ಸಂಪೂರ್ಣ ಬಂದ್!

ಕಾವೇರಿ ನೀರು, ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವೈಫಲ್ಯ ಕಂಡಿದ್ದನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ  ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಂಸದ ಡಿವಿ ಸದಾನಂದ ಗೌಡ, ಶಾಸಕ ಅಶ್ವತ್ಥ್‌ ನಾರಾಯಣ ಸೇರಿ ಹಲವರು ಭಾಗಿಯಾಗಿದ್ದು
ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Exit mobile version