Site icon PowerTV

ಚೈತ್ರಾ ಕುಂದಾಪುರ ಸೇರಿ 7 ಆರೋಪಿಗಳಿಗೆ ಜೈಲು

ಬೆಂಗಳೂರು : ವಂಚನೆ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ಅ.6ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 3ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

ಉದ್ಯಮಿ ಗೋವಿಂದಬಾಬು ಪೂಜಾರಿಗೆ ಬೈಂದೂರು ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ 5 ಕೋಟಿ ರೂಪಾಯಿ ವಂಚಿಸಿರುವ ಪ್ರಕರಣ ಸಂಬಂಧ ನ್ಯಾಯಾಲಯ ಈ ಆದೇಶ ನೀಡಿದೆ. ಈ ವೇಳೆ ಆರೋಪಿ ಚೈತ್ರ ಕುಂದಾಪುರ ಅವರು, ನನ್ನ ಪರ ವಕೀಲರನ್ನಾಗಿ ಹರ್ಷ ಮುತಾಲಿಕ್ ಅವರನ್ನು ನೇಮಿಸಬೇಕು ಎಂದು ಮನವಿ ಮಾಡಿದ್ದರು. ಇದಕ್ಕೆ ಸರ್ಕಾರಿ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದರು.

ಹಾಲಶ್ರೀ ಹೊರತು ಪಡಿಸಿ ಉಳಿದ 7 ಜನ ಆರೋಪಿಗಳನ್ನು ಸಿಸಿಬಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಚೈತ್ರಾ ಕುಂದಾಪುರ, ಗಗನ್ ಕಡೂರು, ರಮೇಶ್, ಚನ್ನಾನಾಯ್ಕ್, ಧನರಾಜ್, ಶ್ರೀಕಾಂತ್, ಪ್ರಸಾದ್ ಬೈಂದೂರು ನನ್ನ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇನ್ನೂ ಪ್ರಕರಣದಲ್ಲಿ ಬಂಧಿತನಾದ ಮತ್ತೊಬ್ಬ ಆರೋಪಿ ಹಿರೇಹಡಗಲಿ ಅಭಿನವ ಹಾಲಾಶ್ರೀ ಸಿಸಿಬಿ ವಿಚಾರಣೆ ಅವಧಿ ಸೆ.29ರವರೆಗೆ ಮುಂದುವರಿಯಲಿದೆ.

Exit mobile version