Site icon PowerTV

ಶಾಸಕ ವಿನಯ್ ಕುಲಕರ್ಣಿ ಅರ್ಜಿ ವಜಾ : ಧಾರವಾಡಕ್ಕಿಲ್ಲ ಪ್ರವೇಶ

ಬೆಂಗಳೂರು : ಷರತ್ತು ಸಡಿಲಿಕೆ ಕೋರಿ ಸಲ್ಲಿಸಿದ್ದ ಶಾಸಕ ವಿನಯ್ ಕುಲಕುರ್ಣಿ ಅವರ ಅರ್ಜಿಯನ್ನು ಹೈಕೋರ್ಟ್​ ಏಕ ಸದಸ್ಯ ಪಿಠವು ಇಂದು ವಜಾಗೊಳಿಸಿದೆ.

ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೀಶ್ ಗೌಡರ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ವಿನಯ್ ಕುಲಕರ್ಣಿ, ಈ ಹಿಂದೆ ಚುನಾವಣೆಗೆ ಸ್ಪರ್ಧಿಸಿದಾಗ ಹಾಗೂ ಸುಪ್ರೀಂ ಕೋರ್ಟ್​ಗೆ ಮೇಲ್ಮನವ ಸಲ್ಲಿಸಿದಾಗಲೂ ಧಾರವಾಡ ಪ್ರವೇಶಕ್ಕೆ ಅನುಮತಿ ನೀಡಿರಲಿಲ್ಲ.

ಪ್ರಸ್ತುತ ಶಾಸಕನಾಗಿದ್ದು, ಈಗಲಾದರೂ ಅವಕಾಶ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದರು. ನ್ಯಾ. ಎಂ. ನಾಗಪ್ರಸನ್ನರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಕ್ಷೇತ್ರ ಭೇಟಿಗೆ ಅನುಮತಿ ನಿರಾಕರಿಸಿದೆ. ಸಿಬಿಐ ಪರ ಎಸ್‌ಪಿಪಿ ಪ್ರಸನ್ನ ಕುಮಾರ್ ವಾದಿಸಿದ್ದರು.

ಶಾಸಕ ವಿನಯ್ ಕುಲಕರ್ಣಿ ಮೇಲೆ ಈಗಾಗಲೇ ಸಾಕ್ಷಿಗಳ ಮೇಲೆ ಪ್ರಭಾವ ಬೀರಿದ ಆರೋಪವಿದೆ. ಪ್ರಮುಖ ಸಾಕ್ಷಿಗಳ ವಿಚಾರಣೆ ಇನ್ನೂ ಆರಂಭವಾಗಿಲ್ಲ.

Exit mobile version