Site icon PowerTV

ಇಂದು ಮಂಡ್ಯ ಬಂದ್‌ಗೆ ಕರೆ!

ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್​ ಆದೇಶ ನೀಡಿದ ಬೆನ್ನಲ್ಲೇ ಕಾವೇರಿಯನ್ನೇ ನಂಬಿ ಬದುಕುತ್ತಿರುವ ಮಂಡ್ಯದಲ್ಲಿ ಕಾವೇರಿ ಹೋರಾಟ ತೀವ್ರಗೊಂಡಿದೆ. ಇಂದು ಮಂಡ್ಯ ಬಂದ್‌ಗೆ ಕರೆ ನೀಡಲಾಗಿದೆ.

ಬೆಂಗಳೂರಿಗೆ ಕಾವೇರಿ ನೀರು ಸರಬರಾಜು ಮಾಡುವ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿಯಲ್ಲಿರುವ ಪಂಪ್ ಹೌಸ್​ಗೆ ವಿವಿಧ ಕನ್ನಡಪರ ಸಂಘಟನೆಗಳು ಮುತ್ತಿಗೆ ಹಾಕಿ ಬೆಂಗಳೂರಿಗೆ ನೀರು ಸರಬರಾಜು ನಿಲ್ಲಿಸುವಂತೆ ಆಗ್ರಹಿಸಿದರು. ಬೆಂಗಳೂರಿಗೆ ಸಂಪೂರ್ಣವಾಗಿ ಕಾವೇರಿ ನೀರು ನಿಲ್ಲಿಸಿ, ರೈತರ ಬೆಳೆಗೆ ನೀರು ಕೊಡುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ, ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಕಾವೇರಿ ಹೋರಾಟದಲ್ಲಿ ಬೆಂಗಳೂರಿಗರು ಭಾಗಿಯಾಗದ್ದಕ್ಕೆ ಆಕ್ರೋಶ ಹೊರಹಾಕಿದರು. ತಮಿಳುನಾಡಿಗೆ ನೀರು ಹರಿಸುತ್ತಿದ್ದರು ಬೆಂಗಳೂರಿಗರು ಸಮಸ್ಯೆಯನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ. ನೀರು ಪೂರೈಕೆ ಸ್ಥಗಿತ ಮಾಡಿದ್ರೆ ಬೆಂಗಳೂರು ಮಂದಿ ಬುದ್ಧಿ ಕಲಿಯುತ್ತಾರೆಂದು ಆಕ್ರೋಶ ಹೊರಹಾಕಿದ್ರಿ.

ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಪಂಪ್ ಹೌಸ್​ಗೆ ಭಾರೀ ಬಂದೋಬಸ್ತ್ ಏರ್ಪಡಿಸಲಾಗಿದೆ. 2 DAR ತುಕಡಿ ಸೇರಿದಂತೆ 100ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.

Exit mobile version