Site icon PowerTV

ಮೋದಿಗೆ ‘ನಮೋ’ ಜೆರ್ಸಿ ಗಿಫ್ಟ್ ನೀಡಿದ ಸಚಿನ್

ಬೆಂಗಳೂರು : ಕ್ರಿಕೆಟ್ ದೇವರು, ಭಾರತದ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಟೀಂ ಇಂಡಿಯಾ ಜೆರ್ಸಿಯನ್ನು ನೀಡಿದ್ದಾರೆ.

ಉತ್ತರ ಪ್ರದೇಶದ ವಾರಣಾಸಿಯಲ್ಲಿ ಪ್ರಧಾನಿ ಮೋದಿಯವರು ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಶಂಕುಸ್ಥಾಪನೆ ಮಾಡಿದರು. ಈ ವೇಳೆ ಸಚಿನ್ ಭಾರತ ಕ್ರಿಕೆಟ್ ತಂಡದ ಜೆರ್ಸಿಯನ್ನು ಗಿಫ್ಟ್​ ಆಗಿ ಕೊಟ್ಟಿದ್ದಾರೆ.

ಈ ಸಂದರ್ಭ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ, ಸುನಿಲ್ ಗವಾಸ್ಕರ್, ದಿಲೀಪ್ ಇದ್ದರು. ಮೋದಿಗೆ ನೀಡಿದ ಜೆರ್ಸಿ ಹಿಂಭಾಗದಲ್ಲಿ ‘ನಮೋ’ 1 ಅಂತ ಬರೆಯಲಾಗಿದೆ. ಸಚಿನ್ ಅವರು ಮೋದಿಗೆ ಜೆರ್ಸಿ ನೀಡುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ವಾರಣಾಸಿ ‘ಕಾಶಿ’ಯಲ್ಲಿ ಶಿವನ ಸ್ವರೂಪಗಳಾದ ಡಮರುಗ, ಬಿಲ್ವಪತ್ರೆ ಹಾಗೂ ತ್ರಿಶೂಲಗಳನ್ನು ಹೋಲುವ ಆಕೃತಿಗಳೊಂದಿಗೆ ನೂತನ ಅಂತರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣವಾಗಲಿದೆ. ರಾಜ್ಯದ ಪ್ರತಿಯೊಬ್ಬ ಕ್ರೀಡಾ ಉತ್ಸಾಹಿ ಪರವಾಗಿ ನಾನು ಮೋದಿಯವರನ್ನು ಸ್ವಾಗತಿಸುತ್ತೇನೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

330 ಕೋಟಿ ರೂ. ಖರ್ಚು

ಕ್ರೀಡಾಂಗಣಕ್ಕಾಗಿ ಉತ್ತರ ಪ್ರದೇಶ ಸರ್ಕಾರ 121 ಕೋಟಿ ರೂ. ಖರ್ಚು ಮಾಡಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದೆ. ಬಿಸಿಸಿಐ ಮೈದಾನ ನಿರ್ಮಾಣಕ್ಕೆ 330 ಕೋಟಿ ರೂ. ಖರ್ಚು ಮಾಡಲಿದೆ.

Exit mobile version