Site icon PowerTV

ಹೈದ್ರಾಬಾದ್​ನಿಂದ ನನ್ನ ವಿರುದ್ಧ ಸ್ಪರ್ಧಿಸಿ : ರಾಹುಲ್ ಗಾಂಧಿಗೆ ಒವೈಸಿ ಸವಾಲ್

ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ವಯನಾಡ್‌ ಕ್ಷೇತ್ರದಿಂದ ಅಲ್ಲ ಹೈದರಾಬಾದ್‌ ಕ್ಷೇತ್ರದಿಂದ ನನ್ನ ವಿರುದ್ಧ ಸ್ಪರ್ಧಿಸಿ ಎಂದು ರಾಹುಲ್ ಗಾಂಧಿಗೆ ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸವಾಲ್ ಹಾಕಿದ್ದಾರೆ.

ಹೈದರಾಬಾದ್‌ನಲ್ಲಿ ಮಾತನಾಡಿರುವ ಅವರು, ರಾಹುಲ್​ ಗಾಂಧಿ ಅವರೇ ನೀವು ಹೈದರಾಬಾದ್‌ನಿಂದ ಚುನಾವಣೆಗೆ ಸ್ಪರ್ಧಿಸಬೇಕೇ ಹೊರತು ವಯನಾಡ್​ ಕ್ಷೇತ್ರದಿಂದ ಅಲ್ಲ. ನಾನು ರಾಹುಲ್ ಗಾಂಧಿಗೆ ಹೈದರಾಬಾದ್‌ನಿಂದ ಚುನಾವಣೆಗೆ ಸ್ಪರ್ಧಿಸುವಂತೆ ತಿಳಿಸುತ್ತೇನೆ. ನೀವು ದೊಡ್ಡ ದೊಡ್ಡ ಹೇಳಿಕೆಗಳನ್ನು ನೀಡುತ್ತೀರಿ. ನನ್ನ ವಿರುದ್ಧ ಬಂದು ಸ್ಪರ್ಧಿಸಿ, ನಾನು ಇದಕ್ಕೆ ಸಿದ್ಧ ಎಂದು ಹೇಳಿದ್ದಾರೆ.

ಕಾಂಗ್ರೆಸ್​ ಆಡಳಿತದ ಅವಧಿಯಲ್ಲಿ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸವಾಯಿತು. ಕಾಂಗ್ರೆಸ್, ಸಮಾಜವಾದಿ ಪಕ್ಷ ಮತ್ತು ಆರ್‌ಜೆಡಿ ನಾಯಕರು ಸಂಸತ್ತಿನಲ್ಲಿ ಮುಸ್ಲಿಮರ ಹೆಸರನ್ನು ತೆಗೆದುಕೊಳ್ಳಲು ಹೆದರುತ್ತಿದ್ದಾರೆ. ನಾನು ಎದ್ದು ನಿಂತು ಮುಸ್ಲಿಂ ಮತ್ತು ಒಬಿಸಿ ಮಹಿಳೆಯರಿಗೂ ಮೀಸಲಾತಿ ಸಿಗಬೇಕು ಎಂದು ಹೇಳಿದೆ. ನೀವು ಮಹಿಳೆಯರು, ಒಬಿಸಿಗಳು ಮತ್ತು ಮುಸ್ಲಿಮರ ವಿರುದ್ಧ ಇದ್ದೀರಿ ಎಂದು ಕಿಡಿಕಾರಿದ್ದಾರೆ.

Exit mobile version