Site icon PowerTV

ಭೀಕರ ಅಪಘಾತ : ಕಾರಿನಲ್ಲಿದ್ದ ಮೂವರ ಉಸಿರು ನಿಲ್ಲಿಸಿದ ಕಿಲ್ಲರ್ ಲಾರಿ

ತುಮಕೂರು : ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ನಡೆದಿದೆ.

ಪಾವಗಡ ತಾಲ್ಲೂಕಿನ ಗುಜ್ಜನಡು ಗ್ರಾಮದ ಆಕಾಶ್ (26), ಕಾರ್ತಿಕ್ (28) ಹಾಗೂ ಹೇಮಂತ್ (30) ಮೃತ ದುರ್ದೈವಿಳು. ಘಟನೆಯಲ್ಲಿ ಉಜ್ವಲ್ ಕೃಷ್ಣ ಎಂಬುವವರಿಗೆ ಗಾಯಾಗಳಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಪಾವಗಡದಿಂದ ಬೆಂಗಳೂರಿಗೆ ತೆರಳುತ್ತಿದ್ದ ಲಾರಿ ಹಾಗೂ ಬೆಂಗಳೂರಿನಿಂದ ಪಾವಗಡಕ್ಕೆ ಹೋಗುತ್ತಿದ್ದ ಕಾರು ತಡ ರಾತ್ರಿ ಮುಖಾಮುಖಿ ಡಿಕ್ಕಿಯಾಗಿವೆ. ಲಾರಿ ಡಿಕ್ಕಿಯಾದ ರಭಕ್ಕೆ ಕಾರು ನಜ್ಜುಗುಜ್ಜಾಗಿದೆ. ಮೃತರು ಗುಜ್ಜನಡು ಗ್ರಾಮದಲ್ಲಿ ನಡೆಯುತ್ತಿದ್ದ ಮಾರಮ್ಮ ದೇವಿ ಜಾತ್ರೆಗೆ ತೆರಳುತ್ತಿದ್ದರು ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? : ಸ್ಟಾಲಿನ್ ಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಿ ಆಕ್ರೋಶ

ಮುಗಿಲು ಮುಟ್ಟಿದ ಆಕ್ರಂದನ

ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಮಿಡಿಗೇಶಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಧುಗಿರಿ ಸರ್ಕಾರಿ ಆಸ್ಪತ್ರೆಯ ಶವಗಾರದ ಬಳಿ ಮೃತ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.

Exit mobile version