Site icon PowerTV

ಬೆಂಗಳೂರು ಬಂದ್ : ಎಂದಿನಂತೆ ಬಿಎಂಟಿಸಿ ಬಸ್ ಸಂಚಾರ

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುವುತ್ತಿರುವುದನ್ನು ವಿರೋಧಿಸಿ ಬೆಂಗಳೂರು ಬಂದ್​ಗೆ ಕರೆ ನೀಡದ್ದರೂ ನಗರದಲ್ಲಿ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಎಂದಿನಂತೆ ಇದೆ.

ವಿವಿಧ ಸಂಘಟನೆಗಳು ಬೆಂಗಳೂರು ಬಂದ್​ಗೆ ಇಂದು ಕರೆ ನೀಡಿವೆ. ಆದರೆ, ಎಂದಿನಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಎಲ್ಲಾ ಮಾರ್ಗಗಳನ್ನು ಕಾರ್ಯಅಚರಣೆ ಮಾಡಲಾಗುತ್ತದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನೂ, ನಿನ್ನೆ ಬಿಎಂಟಿಸಿ ಹಾಗೂ ಕೆಎಸ್ಸಾರ್ಟಿಸಿ ನೌಕರರ ಸಂಘ ಬಂದ್​ಗೆ ಬೆಂಬಲ ನೀಡುವುದಾಗಿ ತಿಳಿಸಿತ್ತು. ಬೆಂಗಳೂರು ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮೆಜೆಸ್ಟಿಕ್‌ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಬಳಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

ಕನ್ನಡಿಗರ ರಕ್ಷಣಾ ವೇದಿಕೆಯ ಕನ್ನಡ ಪ್ರಕಾಶ್ ನೇತೃತ್ವದಲ್ಲಿ ರ್ಯಾಲಿ ನಡೆಯುತ್ತಿದೆ. ಕಾರ್ಯಕರ್ತರು ತೆರೆದ ವಾಹನದಲ್ಲಿ ಟೌನ್​​ಹಾಲ್​ನತ್ತ ರ್ಯಾಲಿ ಹೊರಟಿದ್ದಾರೆ.

Exit mobile version