Site icon PowerTV

ಸಿಂಗಾಪುರ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು!

ಹ್ಯಾಂಗ್​ ಝೌ: ಚೀನಾದ ಹ್ಯಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಹಾಕಿ ಪಂದ್ಯಾವಳಿಯಲ್ಲಿ ಸಿಂಗಾಪುರ ತಂಡದ ವಿರುದ್ಧ ಭಾರತ ತಂಡ ಭರ್ಜರಿ 16–1 ಅಂತರದ ಗೋಲುಗಳ ಜಯಭೇರಿ ಭಾರಿಸಿದೆ.

ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ಮಂದೀಪ್ ಸಿಂಗ್ ಅವರ ಹ್ಯಾಟ್ರಿಕ್ ಗೋಲುಗಳ ನೆರವಿನಿಂದ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಸಿಂಗಾಪುರ ವಿರುದ್ಧದ ಹಾಕಿ ಪಂದ್ಯದಲ್ಲಿ ಭಾರತ ತಂಡ 16–1 ಗೋಲುಗಳ ಅಂತರದಲ್ಲಿ ಭರ್ಜರಿ ಜಯ ದಾಖಲಿಸಿದೆ. ಈ ಪಂದ್ಯಾವಳಿಯಲ್ಲಿ ಭಾರತಕ್ಕೆ ಇದು ಎರಡನೇ ಸತತ ಗೆಲುವಾಗಿದೆ.

ಇದನ್ನೂ ಓದಿ: ಹೋಟೆಲ್​ಗೆ ಕಲ್ಲು ತೂರಿದ ಕಿಡಿಗೇಡಿಗಳು!

ಉಜ್ಬೇಕಿಸ್ತಾನ ವಿರುದ್ಧದ ಪಂದ್ಯಾವಳಿಯ ಆರಂಭಿಕ ಪಂದ್ಯದಲ್ಲಿ 16–0 ಅಂತರದ ಜಯ ಸಾಧಿಸಿದ್ದ ಭಾರತ ತಂಡ ಗೆಲುವಿನ ಓಟ ಮುಂದುವರಿಸಿದೆ. ಇನ್ನು ಕಳೆದ ಪಂದ್ಯದಂತೆಯೇ ಈ ಪಂದ್ಯದಲ್ಲೂ ಭಾರತ ತಂಡ 16 ಗೋಲು ಗಳಿಸಿದ್ದು, ಆ ಮೂಲಕ ಕೇವಲ 2 ಪಂದ್ಯಗಳಿಂದ ಬರೊಬ್ಬರಿ 32 ಗೋಲುಗಳನ್ನು ಬಾರಿಸಿದೆ.

ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ಮಂದೀಪ್ ಸಿಂಗ್ ಅವರ ಹ್ಯಾಟ್ರಿಕ್ ಗೋಲುಗಳು ಭಾರತ ತಂಡಕ್ಕೆ ಭಾರಿ ಮುನ್ನಡೆ ತಂದುಕೊಟ್ಟಿತು.

Exit mobile version