Site icon PowerTV

ಚಂದ್ರಬಾಬು ನಾಯ್ಡುಗೆ ಅ.5ರವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು : ಕೌಶಲ್ಯ ಅಭಿವೃದ್ಧಿ ನಿಗಮದ ಹಗರಣದಲ್ಲಿ ಆಂಧ್ರ ಪ್ರದೇಶದ ಅಪರಾಧ ತನಿಖಾ ಇಲಾಖೆ ತನ್ನ ವಿರುದ್ಧ ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸಬೇಕು ಎಂದು ಆಂಧ್ರಪ್ರದೇಶ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಸಿಜೆಐ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರ ವಿಭಾಗೀಯ ಪೀಠವು ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ ಅವರು ಸಲ್ಲಿಕೆ ಮಾಡಿದ ನಂತರ ತುರ್ತು ವಿಚಾರಣೆಯ ಮನವಿಯನ್ನು ಪರಿಗಣಿಸಲು ನಿರಾಕರಿಸಿತು.

ಇಂದು (ಮಂಗಳವಾರ) ಮತ್ತೊಮ್ಮೆ ಇದನ್ನು ಪ್ರಸ್ತಾಪಿಸುವಂತೆ ಸಿಜೆಐ ಡಿವೈ ಚಂದ್ರಚೂಡ್ ಅವರು ವಕೀಲ ಲೂತ್ರಾ ಅವರಲ್ಲಿ ಹೇಳಿದ್ದಾರೆ. ಟಿಡಿಪಿ ನಾಯಕನಿಗೆ ಕಾನೂನು ಹಿನ್ನಡೆಗಳ ಬೆನ್ನಲ್ಲೇ ಆಂಧ್ರಪ್ರದೇಶ ಹೈಕೋರ್ಟ್, ಪ್ರಕರಣ ರದ್ದು ಮಾಡಲು ಕೋರಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದೆ. ವಿಜಯವಾಡದ ಎಸಿಬಿ ನ್ಯಾಯಾಲಯವು ಅವರ ಕಸ್ಟಡಿಯನ್ನು ಅಕ್ಟೋಬರ್ 5ರವರೆಗೆ ವಿಸ್ತರಿಸಿದೆ.

Exit mobile version