Site icon PowerTV

ಸಗಣಿ ಸುರಿದುಕೊಂಡು ವಿನೂತನ ಪ್ರತಿಭಟನೆ!

ಮಂಡ್ಯ : ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುವುದನ್ನು ವಿರೋಧಿಸಿ ಮಂಡ್ಯದಲ್ಲಿ ಪ್ರತಿಭಟನಾಕಾರರು ಸಗಣಿ ಸುರಿದುಕೊಂಡು ಪ್ರತಿಭಟನೆ ನಡೆಸಿದರು.

ಸಪ್ರೀಂ ಕೋರ್ಟ್ CWRC ಸೂಚನೆಯನ್ನು ಎತ್ತಿಹಿಡಿದು ತಮಿಳುನಾಡಿಗೆ ನಿತ್ಯ ಕಾವೇರಿ ನೀರನ್ನು  ಹರಿಸುವಂತೆ ಸೂಚನೆ ನೀಡಿದ ಬೆನ್ನಲ್ಲೆ ಈಗಾಗಲೇ ಪ್ರತಿಭಟನೆಗಳ ಕಾವು ಹೆಚ್ಚುತ್ತಿರುವ ನಡುವೆಯೂ ಮತ್ತೆ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಆದೇಶ ನೀಡುರುವುದನ್ನು ವಿರೋಧಿಸಿ ಮಂಡ್ಯದಲ್ಲಿ ಪ್ರತಿಭಟನೆ ನಡೆಸಲಾಯಿತು.

ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ರು. ರಾಜ್ಯ ಸರ್ಕಾರ ನಮ್ಮ ಮೇಲೆ ಸಗಣಿ ನೀರು ಹಾಕಿತು ಎಂದು ಘೋಷಣೆ ಕೂಗಿ ಸಗಣಿ ಸುರಿದುಕೊಂಡು ವಿನೂತನ ಪ್ರತಿಭಟನೆ ನಡೆಸಿದ್ದಾರೆ.

Exit mobile version