Site icon PowerTV

ಕರ್ನಾಟಕ ಬಂದ್​ ಹಿನ್ನೆಲೆ : ಬೆಂಗಳೂರು ವಿವಿ ಪರೀಕ್ಷೆಗಳು ಮುಂದೂಡಿಕೆ!

ಬೆಂಗಳೂರು : ಅಖಂಡ ಕರ್ನಾಟಕ ಬಂದ್​ ಹಿನ್ನೆಲೆ ಶುಕ್ರವಾರ ಬೆಂಗಳೂರು ವಿವಿಯಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಿ ಕುಲಸಚಿವರು ಆದೇಶ ಹೊರಡಿಸಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುವಂತೆ ಸುಪ್ರೀಂ ಕೋರ್ಟ್​ ಕಾವೇರಿ ನೀರು ನಿರ್ವಹಣೆ ಪ್ರಾಧಿಕಾರದ ಸೂಚನೆಯನ್ನು ಎತ್ತಿ ಹಿಡಿದಿದ್ದು ತಮಿಳುನಾಡಿಗೆ ಕಾವೇರಿ ನಿರನ್ನು ಹರಿಸುವಂತೆ ಆದೇಶ ನೀಡಿರುವ ಬೆನ್ನಲ್ಲೇ ರಾಜ್ಯಾದ್ಯಂತ ಆಕ್ರೋಶ ಬುಗಿಲೆದ್ದಿದ್ದು ಪ್ರತಿಭಟನೆಗಳು ಮುಂದುವರೆದಿದೆ.

ಇದನ್ನು ಓದಿ: ಜೆಡಿಎಸ್ ಯಾರ ಜೊತೆ ಮೈತ್ರಿ ಮಾಡಿಕೊಂಡರೂ ನಮ್ಮ ತಕರಾರಿಲ್ಲ : ಸಿದ್ದರಾಮಯ್ಯ

ಇದೇ ವೇಳೆ , ಕನ್ನಡ ಪರ ಸಂಘಟನೆಗಳು ಸೆಪ್ಟೆಂಬರ್​ 29 ರಂದು ಅಖಂಡ ಕರ್ನಾಟಕ ಬಂದ್​ ಗೆ ಕರೆ ನೀಡಿದ್ದು ಅಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಿ ಬೆಂಗಳೂರು ವಿಶ್ವವಿದ್ಯಾಲಯ ಮೌಲ್ಯಮಾಪನ ಕುಲಸಚಿವರು ಆದೇಶ ಹೊರಡಿಸಿದ್ದಾರೆ.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬೆಂಗಳೂರು ವಿವಿಯಲ್ಲಿ ಸೆ.29 ಮತ್ತು ಸೆ.30 ರಂದು ನಡೆಯಬೇಕಿದ್ದ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಿ ಬೆಂಗಳೂರು ವಿವಿ ಮೌಲ್ಯಮಾಪನ ಕುಲಸಚಿವರು ಆದೇಶ ಹೊರಡಿಸಿದ್ದಾರೆ.

Exit mobile version