Site icon PowerTV

ಸಂಸದರ ವಿರುದ್ದ ಕರವೇ ಮಹಿಳಾ ಘಟಕದಿಂದ ಪ್ರತಿಭಟನಾ ರ್ಯಾಲಿ!

ಬೆಂಗಳೂರು : ಕಾವೇರಿ ವಿಚಾರದಲ್ಲಿ ಧ್ವನಿ ಎತ್ತದ ರಾಜ್ಯದ ಸಂಸದರ ರಾಜಿನಾಮೆಗೆ ಒತ್ತಾಯಿಸಿ ಮಹಿಳೆಯರು ಆಕ್ರೋಶ ಹೊರಹಾಕಿದ್ದಾರೆ.

ಕರವೇ ಮಹಿಳಾ ಘಟಕದಿಂದ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಾಗುತ್ತಿದ್ದು. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆಯಿಂದ ‌ಪ್ರತಿಭಟನೆ ಮಾಡಲಾಗುತ್ತದೆ. ರಾಜ್ಯದ ಸಂಸದರ ರಾಜೀನಾಮೆಗೆ ಮಹಿಳಾ ‌ಹೋರಾಟಗಾರರು ಒತ್ತಾಯಿಸಲಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಬಂದ್​ : ಕೆಎಸ್​ಆರ್​ಟಿಸಿ ಮತ್ತು ಬಿಎಂಟಿಸಿ ನೌಕರರಿಗೆ ಎಚ್ಚರಿಕೆ ನೀಡಿದ ಇಲಾಖೆ!

ಕಾವೇರಿ ನದಿ ನೀರಿನ ವಿಚಾರದಲ್ಲಿ ಕರ್ನಾಟಕದ ಪರವಾಗಿ ಸಂಘಟಿತ ಹೋರಾಟ ನಡೆಸದ ರಾಜ್ಯದ ಸಂಸದರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ಗಾಂಧಿನಗರದ ಕರವೇ ಕಚೇರಿಯಿಂದ ಫ್ರೀಡಂ ಪಾರ್ಕ್​​ವರೆಗೆ ರ್ಯಾಲಿ ನಡೆಯಲಿದೆ. ಈ ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ‌ವೇದಿಕೆಯ ಸಾವಿರಾರು ಮಹಿಳಾ ‌ಹೋರಾಟಗಾರರು ಭಾಗಿಯಾಗಿದ್ದಾರೆ .

Exit mobile version