Site icon PowerTV

ಕಾವೇರಿ ಹೋರಾಟಕ್ಕೆ ಈಗ ‘ಗಜ’ ಬಲ ಬಂತು

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಯುತ್ತಿರುವುದನ್ನು ವಿರೋಧಿಸಿ ಕನ್ನಡ ಚಿತ್ರರಂಗ ಕೂಡ ಇಂದು ಬೀದಿಗಿಳಿದು ಪ್ರತಿಭಟನೆ ನಡೆಸಿದೆ.

ಕರ್ನಾಟಕ ವಾಣಿಜ್ಯ ಮಂಡಳಿ ಪಕ್ಕದಲ್ಲಿರುವ ಗುರುರಾಜ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ನಟ ದರ್ಶನ್ ತೂಗುದೀಪ ಅವರು ಭಾಗವಹಿಸಿ, ಕನ್ನಡ ನೆಲ ಜಲ ವಿಚಾರದಲ್ಲಿ ತಾವು ಸದಾ ನಿಮ್ಮೊಂದಿಗೆ ಇರುವುದಾಗಿ ಬೆಂಬಲ ಸೂಚಿಸಿದ್ದಾರೆ.

ಪ್ರತಿಭಟನೆಗೆ ಬಂದ ದರ್ಶನ್ ಅವರನ್ನು ನಟ ಶಿವಣ್ಣ ಆತ್ಮೀಯವಾಗಿ ಸ್ವಾಗತಿಸಿದರು. ಶಿವಣ್ಣ ಪಕ್ಕದಲ್ಲೇ ಕುಳಿತ ನಟ ದರ್ಶನ್ ಕಾವೇರಿ ವಿಚಾರದ ಬಗ್ಗೆ ಚರ್ಚಿಸಿದರು. ಬಳಿಕ ಮಾತನಾಡಿದ ದರ್ಶನ್ ಅವರು, ‘ನಾವು ಆಗಲೇ ಮಾತನಾಡಿ ಆಗಿದೆ. ದೊಡ್ಡವರು ಇದಾರೆ, ಶಿವಣ್ಣ ಇದಾರೆ. ಅವರು ಮಾತನಾಡುತ್ತಾರೆ’ ಎಂದು ಚುಟುಕಾಗಿ ಭಾಷಣ ಮುಗಿಸಿದರು.

ದರ್ಶನ್ ಫ್ಯಾನ್ಸ್​ ಬೆಂಬಲ

ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರದ ವಿರುದ್ಧ ಕನ್ನಡ ಸಂಘಟನೆಗಳ ಒಕ್ಕೂಟ ಕರೆ ನೀಡಿದ್ದ ಕರ್ನಾಟಕ ಬಂದ್ ಬೆಂಬಲಿಸಿ ಚಿತ್ರನಟ ದರ್ಶನ್ ಅಭಿಮಾನಿಗಳು ಮಂಗಳಮುಖಿಯರು ಮಂಡ್ಯದಲ್ಲಿ ಪ್ರತಿಭಟಿಸಿದರು. ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕಿನಿಂದ ದರ್ಶನ್ ಸೇನಾ ಸಮಿತಿ ಆಶ್ರಯದಲ್ಲಿ ಮೆರವಣಿಗೆ ಹೊರಟ ದರ್ಶನ್ ತೂಗುದೀಪ್ ಅಭಿಮಾನಿಗಳು ಬೆಂಗಳೂರು-ಮೈಸೂರು ಹೆದ್ದಾರಿ ಮೂಲಕ ಸಾಗಿ ನಾವು ಎಂದೆಂದಿಗೂ ರೈತಪರ ಎಂದು ತಿಳಿಸಿದರು.

Exit mobile version