Site icon PowerTV

ಗಜಪಡೆ ಮಾವುತರು, ಕಾವಾಡಿಗಳಿಗೆ ವಿಶೇಷ ಭೋಜನ

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಅರಮನೆಗೆ ಆಗಮಿಸಿರುವ ಗಜಪಡೆ ಮಾವುತರು ಮತ್ತು ಕಾವಾಡಿಗರ ಕುಟುಂಬದ ಸದಸ್ಯರಿಗೆ ಇಂದು ವಿಶೇಷ ಭೋಜನ ವ್ಯವಸ್ಥೆ ಮಾಡಿ ಉಣಬಡಿಸಲಾಯಿತು.

ಇದೇ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್​.ಸಿ. ಮಹದೇವಪ್ಪ ಅವರು ಮಾವುತರು ಮತ್ತು ಕಾವಾಡಿಗರ ಆರೋಗ್ಯ ವಿಚಾರಿಸಿ, ಅವರಿಗಾಗಿ ಏರ್ಪಡಿಸಿದ್ದ ಆರೋಗ್ಯ ಶಿಬಿರದಲ್ಲಿ ಪಾಲ್ಗೊಂಡರು. ಬಳಿಕ, ಮಕ್ಕಳ ಚಂದದ ಸಾಂಸ್ಕೃತಿಕ ಕಾರ್ಯಕ್ರಮವನ್ನು ವೀಕ್ಷಿಸಿದರು.

ಇದೇ ವೇಳೆ ಹಸಿರು ಕ್ರಾಂತಿಯ ಪಿತಾಮಹ, ಕೃಷಿ ವಿಜ್ಞಾನಿ ಎಂ.ಎಸ್.ಸ್ವಾಮಿನಾಥನ್ ಅವರ ನಿಧನದ ಹಿನ್ನೆಲೆಯಲ್ಲಿ  ಮೌನಾಚರಣೆ ಮೂಲಕ ಅವರಿಗೆ ಗೌರವ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕರಾದ ತನ್ವೀರ್ ಸೇಠ್, ಕೆ.ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಸಂಸದ ಪ್ರತಾಪ ಸಿಂಹ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ. ಗಾಯಿತ್ರಿ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್  ಮತ್ತಿತರಿದ್ದರು.

Exit mobile version