Site icon PowerTV

ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಕೆಟ್ಟ ಮೇಲೆ ಬುದ್ದಿ ಬರುತ್ತಿದೆ : ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಕೆಟ್ಟ ಮೇಲೆ ಬುದ್ದಿ ಬರುತ್ತಿದ್ದು, ಈಗ ಕಾನೂನು ತಜ್ಞರು, ರೈತರನ್ನು ಕರೆದು ಮಾತನಾಡಿಸುತ್ತಿದೆ. ಈ ಕೆಲಸ ಮೊದಲೇ ಮಾಡಬೇಕಿತ್ತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.

ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಸರ್ಕಾರದಲ್ಲಿ ಸಿಎಂ ಡಿಸಿಎಂ ನಡುವೆ ಹೊಂದಾಣಿಕೆಯಿಲ್ಲ ಆದರೆ, ಗೃಹ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ನಡುವೆ ಹೊಂದಾಣಿಕೆ ಇಲ್ಲ ಎನ್ನುವುದು ಸಾಬೀತಾಗಿದೆ.

ಕೊಳ್ಳೆ ಹೊಡೆದ ಮೇಲೆ ಬಾಗಿಲು ಹಾಕಿದಂತೆ ಈಗ ಕಾನೂನು ಹೊರಾಟ ಮಾಡಲು ಹೊರಟಿದ್ದಾರೆ. ಕಾನೂನು ತಜ್ಞರ ಜೊತೆ ಮಾತನಾಡುವ ಕೆಲಸವನ್ನು ಮುಂಚೆಯೇ ಮಾಡಬೇಕಿತ್ತು. ಈಗಲಾದರೂ ಸರ್ಕಾರ ಪ್ರಾಮಾಣಿಕವಾಗಿ ಕಾನೂನು ಹೋರಾಟ ಮಾಡಲಿ,

ಇದನ್ನೂ ಓದಿ: ಕಾವೇರಿ ಹೋರಾಟ: ಸಿಎಂ ಸಿದ್ದರಾಮಯ್ಯರಿಗೆ ಹಕ್ಕೊತ್ತಾಯಗಳನ್ನು ಸಲ್ಲಿಸಿದ ಎಎಪಿ!

ಈ ಸರ್ಕಾರಕ್ಕೆ ಕೆಟ್ಟ ಮೇಲೆ ಬುದ್ದಿ ಬರುತ್ತಿದೆ. ಕಾನೂನು ತಜ್ಞರು ರೈತರನ್ನು ಮುಂಚೆಯೇ ಮಾತನಾಡಬೇಕಿತ್ತು. ಗಡಿ, ನೆಲ ಜಲ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾ. ಮೂರ್ತಿ ಶಿವರಾಜ ಪಾಟಿಲ್ ಪರಿಣಿತರಿದ್ದಾರೆ‌ ಅವರನ್ನು‌ ಕರೆದು ಮಾತನಾಡಿಸಬೇಕಿತ್ತು. ಇನ್ನೂ ಅನೇಕ ಕಾನೂನು ತಜ್ಞರಿದ್ದಾರೆ. ಅವರೊಡನೆ ಮಾತಬಾಡಬೇಕಿತ್ತು ಎಂದರು.
ಬರ ಪರಿಹಾರ ನೀಡಲಿ

ರಾಜ್ಯದಲ್ಲಿ ಬರಗಾಲ ಇದ್ದಾಗ ಇಂತಹ ಸರ್ಕಾರ ಇರೋದು ದುರಂತ‌. ಉತ್ತರ ಕರ್ನಾಟಕದ ನೂರಾರು ತಾಲೂಕುಗಳಲ್ಲಿ ಬರ ಇದೆ. ಇದಕ್ಕೂ ಇವರು ಕೇಂದ್ರದ ಕಡೆಗೆ ಬೆರಳು ತೋರಿಸುತ್ತಾರೆ. ಪ್ರವಾಹ ಬಂದಾಗ ನಾವೇ ಪರಿಹಾರ ಕೊಟ್ಟಿದ್ದೇವೆ. ಕೇಂದ್ರದ ಪರಿಹಾರಕ್ಕಿಂತ ಎರಡು ಪಟ್ಟು ಹಣ ಕೊಟ್ಡಿದ್ದೆವೆ. ಸಂಕಷ್ಟದ ಸಂದರ್ಭದಲ್ಲಿ ಸರ್ಕಾರ ಯಾವ ರೀತಿ ವರ್ತಿಸುತ್ತಿದೆ. ಅನ್ನುವುದರ ಮೇಲೆ ಸರ್ಕಾರದ ನಡೆ ಗೊತ್ತಾಗುತ್ತಿದೆ ಎಂದು ಹೇಳಿದರು.

Exit mobile version