Site icon PowerTV

ಕಲುಷಿತ ನೀರು ಸೇವನೆ 20ಕ್ಕೂ ಅಧಿಕ ಮಕ್ಕಳು ಆಸ್ಪತ್ರೆಗೆ ದಾಖಲು!

ಯಾದಗಿರಿ : ಕಲುಷಿತ ನೀರು ಸೇವಿಸಿ 20ಕ್ಕೂ ಅಧಿಕ ಮಕ್ಕಳು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಯಾದಗಿರಿಯ ಸುರಪುರ ತಾಲೂಕಿನ ಯಕ್ತಾಪುರ ಗ್ರಾಮದ ಕಸ್ತೂರಿಬಾ ವಸತಿ ಶಾಲೆಯಲ್ಲಿ ನಡೆದಿದೆ.

ಕಲುಷಿತ ನೀರು ಸೇವಿಸಿದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಂತಿ, ಭೇದಿ ಕಾಣಿಸಿಕೊಂಡಿದೆ. ಮಕ್ಕಳು ಅಸ್ವಸ್ಥರಾಗಿದ್ದು, ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದನ್ನೂ ಓದಿ: ಸಂವಿಧಾನದ ಮೌಲ್ಯವನ್ನು ತನ್ನ ಮೌಲ್ಯವಾಗಿ ಆಚರಿಸುತ್ತಿರುವ ಏಕೈಕ ರಾಷ್ಟ್ರೀಯ ಪಕ್ಷ ಕಾಂಗ್ರೆಸ್:ಸಿಎಂ

ಯಾದಗಿರಿ ತಾಲೂಕು ವೈದ್ಯಾಧಿಕಾರಿಗಳಾದ ಡಾ.ಆರ್.ವಿ. ನಾಯಕ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥ ಮಕ್ಕಳ ಆರೋಗ್ಯವನ್ನು ವಿಚಾರಿಸಿದ್ದಾರೆ.

Exit mobile version