Site icon PowerTV

ಮಗಳನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಮೂವರು ನೀರುಪಾಲು

ಮೈಸೂರು : ನಾಲೆಗೆ ಬಿದ್ದ ಪುತ್ರಿಯನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಮೂವರು ನೀರು ಪಾಲಾದ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಚಂಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಅಪ್ಪ ಮಹಮ್ಮದ್ ಕಪೀಲ್, ಅಮ್ಮ ಶಾವರ ಭಾನು ಹಾಗೂ ಪುತ್ರಿ ಶಾಹೀರಾ ಭಾನು ಮೃತ ದುರ್ದೈವಿಗಳು. ಆಕಸ್ಮಿಕವಾಗಿ ಕಾಲು ಜಾರಿ ನಾಲೆಗೆ ಬಿದ್ದ ಮಗಳನ್ನು ಕಾಪಾಡಲು ಹೋಗಿ ಅಪ್ಪ, ಅಮ್ಮ ಹಾಗೂ ಪುತ್ರಿ ಮೂವರೂ ಸಾವನ್ನಪ್ಪಿದ್ದಾರೆ.

ನುಗು ಜಲಾಶಯದ ಬಲದಂಡೆ ನಾಲೆಯಲ್ಲಿ ಕೈ ಕಾಲು ತೊಳೆಯಲು ಹೋದಾಗ ಘಟನೆ ನಡೆದಿದೆ. ಶಾಹೀರಾ ಭಾನು ಮೊದಲಿಗೆ ಕಾಲು ಜಾರಿ ಬಿದ್ದಿದ್ದು, ರಕ್ಷಣೆಗೆ ಹೋದ ಅಪ್ಪ, ಅಮ್ಮ ಸೇರಿ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? : ಕೌಟುಂಬಿಕ ಕಲಹ : ಒಂದು ಎಕರೆ ಅಡಿಕೆ ತೋಟ ನಾಶ

ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಭೇಟಿ ನೀಡಿದ್ದು, ಮೂವರ ಮೃತ ದೇಹವನ್ನು ನೀರಿನಿಂದ ಹೊರತೆಗೆದಿದ್ದಾರೆ. ಸರಗೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದ್ದು, ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Exit mobile version