Site icon PowerTV

ಹಾಸ್ಯ ನಟನ ಕಾರು ಅಪಘಾತ : ಮಹಿಳೆ ಸಾವು, FIR ದಾಖಲು

ಬೆಂಗಳೂರು : ಸ್ಯಾಂಡಲ್​ವುಡ್​ ಹಾಸ್ಯ ನಟ ನಾಗಭೂಷಣ್ ಕಾರು ಅಪಘಾತ ಸಂಭವಿಸಿದ್ದು, ಮಹಿಳೆ ಸಾವನ್ನಪ್ಪಿ ಪತಿ ಗಂಭೀರವಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಫುಟ್​ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ದಂಪತಿಗೆ ಕಾರು ಡಿಕ್ಕಿಯಾಗಿದೆ. ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ತಡರಾತ್ರಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಈ ಸಂಬಂಧ ಕುಮಾರಸ್ವಾಮಿ ಲೇಔಟ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ನಟ ನಾಗಭೂಷಣ್​ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪತಿ ಕೃಷ್ಣ ತೀವ್ರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಪ್ರೇಮಾ ಮಗ ಪಾರ್ಥ ಅವರು ಕುಮಾರಸ್ವಾಮಿ ಲೇಔಟ್​ ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ನಾಗಭೂಷಣ್ ಹೇಳಿದ್ದೇನು?

ಈ ಕುರಿತು ಪ್ರತಿಕ್ರಿಯಿಸಿರುವ ನಾಗಭೂಷಣ್ ಅವರು, ನಾನು ನನ್ನ ಸ್ನೇಹಿತರನ್ನು ನೋಡಲು ಆರ್.ಆರ್ ನಗರಕ್ಕೆ ಹೋಗಿ ವಾಪಸ್ ಮನೆಗೆ ಹೋಗುತ್ತಿದ್ದೆ. ವಸಂತಪುರ ಮುಖ್ಯರಸ್ತೆಯಲ್ಲಿ ಉತ್ತರಹಳ್ಳಿ ಕಡೆಯಿಂದ ಕೋಣನಕುಂಟೆ ಕ್ರಾಸ್ ಕಡೆಗೆ ಹೋಗಲು ವಸಂತಪುರ ಮುಖ್ಯರಸ್ತೆಯ ಹತ್ತಿರ ತಡರಾತ್ರಿ ಸುಮಾರು 9.45 ಗಂಟೆಯ ಸಮಯದಲ್ಲಿ ಕಾರಿನಲ್ಲಿ ಹೋಗುತ್ತಿರುವಾಗ ಒಬ್ಬ ಹೆಂಗಸು ಮತ್ತು ಒಬ್ಬರು ಗಂಡಸು ಪುಟ್ ಪಾತ್ ಮೇಲಿಂದ ರಸ್ತೆಯ ಕೆಳಗೆ ಇಳಿದು ಬಂದರು. ಅವರು ಬಂದಿದ್ದನ್ನು ನೋಡಿ ನನಗೆ ಗಾಬರಿಯಾಗಿ ಅವರಿಗೆ ನನ್ನ ಕಾರು ಡಿಕ್ಕಿ ಹೊಡೆಯಿತು ಎಂದು ತಿಳಿಸಿದ್ದಾರೆ.

Exit mobile version