Site icon PowerTV

ಪಿಯುಸಿ ಫೇಲ್ ಆಗಿದ್ದಕ್ಕೆ ಅಪಾರ್ಟ್​ಮೆಂಟ್​ನಿಂದ ಜಿಗಿದು ಬಾಲಕಿ ಆತ್ಮಹತ್ಯೆ

ಬಿಹಾರ : ಪಿಯುಸಿ (12ನೇ ತರಗತಿ) ಪರೀಕ್ಷೆಯಲ್ಲಿ ಫೇಲ್‌ ಆಗಿದ್ದಕ್ಕೆ ಮನನೊಂದು ಬಾಲಕಿಯೊಬ್ಬಳು ಅಪಾರ್ಟ್‌ಮೆಂಟ್‌ನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಿಹಾರದ ಪಟ್ನಾದಲ್ಲಿ ನಡೆದಿದೆ.

ಆಕೆ ಪರೀಕ್ಷೆಯಲ್ಲಿ ಫೇಲ್‌ ಆಗಿದ್ದೇ ಆತ್ಮಹತ್ಯೆ ಯತ್ನಕ್ಕೆ ಕಾರಣ ಎನ್ನಲಾಗಿದೆ. ಫೇಲ್‌ ಆಗಿದ್ದರಿಂದ ಖಿನ್ನತೆಗೆ ಒಳಗಾಗಿದ್ದಳು. ನಿನ್ನೆ (ಶನಿವಾರ) ಅಪಾರ್ಟ್‌ಮೆಂಟ್‌ ಮೇಲಿನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ಅಲ್ಲೇ ಇದ್ದ ಯುವಕನೊಬ್ಬ ಆಕೆಯನ್ನು ರಕ್ಷಿಸಲು ಮುಂದಾಗಿದ್ದಾನೆ.

ನಾಗೇಶ್ವರ್‌ ಕಾಲೋನಿಯ ಜೈ ಭಾರತ್‌ ರೆಸಿಡೆನ್ಸಿಯಲ್ಲಿ ಬಾಲಕಿ ತನ್ನ ಪಾಲಕರೊಂದಿಗೆ ವಾಸವಾಗಿದ್ದಳು. ಆಕೆ ಅಪಾರ್ಟ್‌ಮೆಂಟ್‌ನ ನಾಲ್ಕನೇ ಮಹಡಿಯಿಂದ ಜಿಗಿದಿದ್ದಾಳೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಯಾವುದೇ ಪ್ರಯೋಜನವಾಗಲಿಲ್ಲ. ದುರಾದೃಷ್ಟವಶಾತ್ ಆಸ್ಪತ್ರೆಯಲ್ಲೇ ಆಕೆಯು ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.

ಅವಳು ಅಪಾರ್ಟ್‌ಮೆಂಟ್‌ನ ತುದಿಯಲ್ಲಿ ಕುಳಿತುಕೊಳ್ಳುವುದು ಮತ್ತು ಅಲ್ಲಿಂದ ಜಿಗಿಯುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

Exit mobile version