Site icon PowerTV

ಮಲೆಮಹದೇಶ್ವರ ಸ್ವಾಮಿ ದರ್ಶನ ಪಡೆದ ನಟ ರಾಘಣ್ಣ

ಚಾಮರಾಜನಗರ : ನಟ ರಾಘವೇಂದ್ರ ರಾಜಕುಮಾರ್ ಅವರು ಚಾಮರಾಜನಗರದಲ್ಲಿರುವ ಮಲೆಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ.

ಕುಟುಂಬ ಸಮೇತ ಮಲೆಮಹದೇಶ್ವರ ಬೆಟ್ಟಕ್ಕೆ ಭೇಟಿ ಕೊಟ್ಟು ಮಾದಪ್ಪನ ದರ್ಶನ ಪಡೆದುಕೊಂಡಿದ್ದಾರೆ. ಇನ್ನು ದಾಸೋಹ ಭವನದಲ್ಲಿ ನಟ ರಾಘವೇಂದ್ರ ರಾಜಕುಮಾರ್ ಪ್ರಸಾದ ಸೇವಿಸಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ತಂದೆ ಡಾ.ರಾಜ್ ಕುಮಾರ್ ಅವರು ಒಂದು ಸಲ ಇಲ್ಲಿಗೆ ಕರೆದುಕೊಂಡು ಬಂದಿದ್ದರು. ಆ ಮೇಲೆ ಇಲ್ಲಿಗೆ ಬಂದಿರಲಿಲ್ಲ ಎಂದು ಹೇಳಿದ್ದಾರೆ.

ಪುತ್ರ ಯುವ ರಾಜಕುಮಾರ್ ನಟನೆಯ ಸಿನಿಮಾ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿದೆ. ಅದಕ್ಕಾಗಿ ಮಾದಪ್ಪನ ದರ್ಶನ ಪಡೆಯಲು ಬಂದಿದ್ದೇವೆ. ಈ ಜಾಗ ತುಂಬಾ ಚೆನ್ನಾಗಿದೆ. ಮಲೆಮಹದೇಶ್ವರ ತಾಣ ಸ್ವರ್ಗದಂತೆ ಭಾಸವಾಗುತ್ತಿದೆ. ವರ್ಷಕ್ಕೆ ಒಂದು ಸಲವಾದರೂ ಇಲ್ಲಿಗೆ ಬರಬೇಕು ಅಂತ ಅನಿಸುತ್ತಿದೆ. ಇನ್ಮೇಲೆ ಮಾದಪ್ಪನ ದರ್ಶನ ಪಡೆಯಲು ಬರ್ತಿನಿ ಎಂದು ತಿಳಿಸಿದ್ದಾರೆ.

Exit mobile version