Site icon PowerTV

ಹಣದ ಬದಲು 10 ಕೆಜಿ ಅಕ್ಕಿ ನೀಡಲು ಸರ್ಕಾರ ನಿರ್ಧಾರ

ಬೆಂಗಳೂರು : ಅಕ್ಟೋಬರ್ ತಿಂಗಳಿನಿಂದ ಅನ್ನಭಾಗ್ಯ ಯೋಜನೆಯಡಿ ಬರಪೀಡಿತ ತಾಲೂಕುಗಳಲ್ಲಿ ಹಣದ ಬದಲು 10 ಕೆ.ಜಿ ಅಕ್ಕಿ ನೀಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಕಿ ಖರೀದಿ ಟೆಂಡರ್ ಪ್ರಕ್ರಿಯೆ ಸಂಬಂಧಿಸಿದ ಮಾತುಕತೆ ಅಂತಿಮ ಹಂತದಲ್ಲಿದ್ದು, ಶೀಘ್ರವೇ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳಿಸಿ ಫಲಾನುಭವಿಗಳಿಗೆ 10 ಅಕ್ಕಿ ಪೂರೈಕೆ ಮಾಡಲಾಗುವುದು ಎಂದು ಪುನರುಚ್ಛಾರ ಮಾಡಿದ್ದಾರೆ.

ಆದರೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಅಕ್ಕಿ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿಲ್ಲ. ಹೀಗಾಗಿ, ಮುಂದಿನ ತಿಂಗಳೂ ಹೆಚ್ಚುವರಿ ಅಕ್ಕಿ ಬದಲು ಹಣವನ್ನೇ ನೀಡುವುದಾಗಿ ಹೇಳಿದ್ದರು. ಇದೀಗ ಮತ್ತೆ ಅಕ್ಟೋಬರ್‌ನಲ್ಲಿ 10 ಕೆ.ಜಿ. ಅಕ್ಕಿ ನೀಡುವುದಾಗಿ ಸಚಿವ ಕೆ.ಎಚ್. ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ.

Exit mobile version