Site icon PowerTV

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ : ಇಬ್ಬರು ಪುಟ್ಟ ಮಕ್ಕಳು ಸೇರಿ ಮೂವರು ದುರ್ಮರಣ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನ ಸೋಮಪುರ ಬಳಿಯ ನೈಸ್ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 2 ವರ್ಷದ ಪುಟ್ಟ ಮಗು ಸೇರಿ ಮೂವರು ಮೃತಪಟ್ಟಿದ್ದಾರೆ.

ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆ ಕಡೆಗೆ ತೆರಳುತಿದ್ದ ಕಾರು ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದು ಬಳಿಕ ಮೋರಿಯ ಗೋಡೆಗೆ ಗುದ್ದಿದೆ. ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಕಾರಿನಲ್ಲಿದ್ದ ಸಿಂಧು ಹಾಗೂ ಎರಡು ವರ್ಷದ ಪುಟ್ಟ ಮಗು ಸಾವನ್ನಪ್ಪಿದ್ದಾರೆ.

ಇನ್ನು ಗಾಯಾಳು ಮಹೇಂದ್ರ ಹಾಗೂ ಇನ್ನೊಂದು ಮಗುವನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮತ್ತೊಂದು ಮಗು ಕೂಡಾ ಸಾವನ್ನಪ್ಪಿದೆ.  ವಿಷಯ ತಿಳಿದು ಘಟನೆ ಸ್ಥಳಕ್ಕೆ ತಲಘಟ್ಟಪುರ ಸಂಚಾರ ಪೊಲೀಸರು ಭೇಟಿ ನೀಡಿದ್ದು, ಮೃತ ದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.

ನಿಯಂತ್ರಣ ತಪ್ಪಿದ ಲಾರಿ ಪಲ್ಟಿ

ಕಾರು ಗುದ್ದಿದ್ದರಿಂದ ಲಾರಿ ಸಹ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ. ಇನ್ನು ಗಾಯಾಳು ಮಹೇಂದ್ರ ಹಾಗೂ ಇನ್ನೊಂದು ಮಗುವನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಬಗ್ಗೆ ತಲಘಟ್ಟಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version