Site icon PowerTV

ಕರ್ನಾಟಕದಲ್ಲೂ ಜಾತಿ ಜನಗಣತಿ ಬಿಡುಗಡೆ ಮಾಡಿ : ಕೆ.ಜಯಪ್ರಕಾಶ್ ಹೆಗ್ಡೆ

ಬೆಂಗಳೂರು : ಬಿಹಾರ ರಾಜ್ಯದಲ್ಲಿ ಜಾತಿ ಜನಗಣತಿ ವರದಿ ಪ್ರಕಟ ಹಿನ್ನೆಲೆ ರಾಜ್ಯದಲ್ಲೂ ಜಾತಿ ಜನಗಣತಿ ವರದಿ ಬಿಡುಗಡೆ ಮಾಡಿ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲೂ ಜಾತಿ ಜನಗಣತಿ ವರದಿ ಬಿಡುಗಡೆಗೆ ಒತ್ತಾಯ ಮಾಡಲಾಗಿದೆ. ಸಾಮಾಜಿಕ ಮತ್ತು ಶೈಕ್ಷಣಿಕ  ವರದಿಯನ್ನು ಸಿದ್ಧಪಡಿಸಿ ನಾವು ಸರ್ಕಾರಕ್ಕೆ ಅರ್ಜಿ ಸಲ್ಲಿಸಲಿದ್ದೇವೆ. ಇದೇ ನವೆಂಬರ್ ಒಳಗೆ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ.

ಕೆಲವು ವಿಚಾರ ಪತ್ರಿಕೆಯಲ್ಲಿ ಬಹಿರಂಗ ಆಯ್ತು ಅಂತಾರೆ, ಅದು ಸುಳ್ಳು. ವಾಸ್ತವಾಂಶ ಬೇರೆ ಇದೆ. ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ಅವಧಿಯಲ್ಲಿ ಯಾಕೆ ವರದಿ ಸಲ್ಲಿಕೆ ಆಗಿಲ್ಲ‌ ಅಂತ ಆಗಿನ ಆಯೋಗದ ಅಧ್ಯಕ್ಷರನ್ನು ಕೇಳಬೇಕು ಎಂದು ಕೆ.ಜಯಪ್ರಕಾಶ್ ಹೆಗ್ಡೆ ತಿಳಿಸಿದ್ದಾರೆ.

ನಮ್ಮ ವರದಿಯಲ್ಲಿ ಹೆಚ್ಚಿನ ಮಾಹಿತಿ ಇದೆ

ಬಿಹಾರದಲ್ಲಿ ಕೇವಲ ಜಾತಿ ಜನಗಣತಿ ಕೊಡಲಾಗಿದೆ. ಆದರೆ, ನಮ್ಮ ವರದಿಯಲ್ಲಿ ಅದಕ್ಕಿಂತ ಹೆಚ್ಚಿನ ಮಾಹಿತಿ ಇದೆ. ನಮ್ಮ ವರದಿಯಲ್ಲಿ ಸಮಯದಾಯವಾರು ಮೀಸಲಾತಿ, ಒದಗಿಸಬೇಕಿರುವ ಸೌಲಭ್ಯಗಳ ಬಗ್ಗೆಯೂ ಮಾಹಿತಿ ಇದೆ. ಈ ಹಿನ್ನೆಲೆ ಕರ್ನಾಟಕದಲ್ಲೂ ಜಾತಿಗಣತಿಯನ್ನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

Exit mobile version