Site icon PowerTV

ಪ್ರಯಾಣಿಕರ ಗಮನಕ್ಕೆ: ಮೆಟ್ರೋ ಹಸಿರು ಮಾರ್ಗದ ಸಂಚಾರದಲ್ಲಿ ವ್ಯತ್ಯಯ!

ಬೆಂಗಳೂರು : ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಸಂಚರಿಸಿದ ರೀ ರೈಲ್‌ ವಾಹನ ಆಯತಪ್ಪಿದ ಹಿನ್ನಲೆಯಲ್ಲಿ ಹಸಿರು ಮಾರ್ಗದ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ.

ಮೆಟ್ರೋ ರೈಲುಗಳಲ್ಲಿ ತಾಂತ್ರಿಕ ತೊಂದರೆಯಾದಾಗ ಸರಿಪಡಿಸಲು ಬಳಸುವ ರೀ ರೈಲ್ ರಾಜಾಜಿನಗರ ನಿಲ್ದಾಣದ ತಿರುವಿನಲ್ಲಿ ಹಳಿ ತಪ್ಪಿದ ಪರಿಣಾಮ ಈ ಸಮಸ್ಯೆ ಎದುರಾಗಿದೆ. ನಾಗಸಂದ್ರದಿಂದ ರೇಷ್ಮೆ ಸಂಸ್ಥೆವರೆಗಿನ ಹಳಿಯಲ್ಲಿ ಸಂಚಾರಕ್ಕೆ ತೊಂದರೆಯಾಗಿದ್ದು, ಯಶವಂತಪುರದಿಂದ ಮಂತ್ರಿ ಸ್ಕ್ವೇರ್‌ವರೆಗೆ ರೈಲುಗಳು ಏಕಮುಖವಾಗಿ ಮಾತ್ರ ಸಂಚರಿಸುತ್ತಿವೆ.

ಇದನ್ನೂ ಓದಿ: ಚಲಿಸುತ್ತಿದ್ದ ಕ್ರೇನ್​ಗೆ ಬೆಂಕಿ!: ಭಯಭೀತರಾದ ಜನ

ಸದ್ಯ ಈಗ ಹಸಿರು ಮಾರ್ಗದಲ್ಲಿ ಅರ್ಧಗಂಟೆಗೊಂದು ರೈಲು ಸಂಚರಿಸುತ್ತಿದೆ. ಇಂದು ಮಧ್ಯಾಹ್ನದವರೆಗೂ ಪ್ರಯಾಣಿಕರಿಗೆ ತೊಂದರೆಯಾಗುವ ಸಾಧ್ಯತೆ ಇದೆ. ರೀ ರೈಲ್ ತೆರವು ಆಗುವವರೆಗೆ ಏಕಮುಖ ಸಂಚಾರ ಇರಲಿದೆ ಎಂದು BMRCL ಉನ್ನತ ಮೂಲಗಳು ತಿಳಿಸಿದೆ.

Exit mobile version