Site icon PowerTV

ಬೆಂಗಳೂರು ನಗರ ವಿವಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ!

ಬೆಂಗಳೂರು : ನಗರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ ಮಾಡಲಾಗಿದೆ.

ಬೆಂಗಳೂರು ನಗರ ವಿವಿ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಿದ್ದು ದಂಡ ರಹಿತ ಅರ್ಜಿ ಸಲ್ಲಿಸಲು ಅಕ್ಟೋಬರ್ 7ರವರೆಗೆ ಅವಕಾಶ ನೀಡಿತ್ತು. 200ರೂ ದಂಡ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 17 ಕೊನೆ ದಿನವಾಗಿದೆ.

ಇದನ್ನು ಓದಿ: ಬೆಂಗಳೂರಿನಲ್ಲಿ ಶಾಲಾ ಸಮಯ ಬದಲಾವಣೆ?

ಈ ಹಿಂದೆ ಬೆಂಗಳೂರು ನಗರ ವಿಶ್ವವಿದ್ಯಾಲಯ ಸೆಪ್ಟೆಂಬರ್ 30ರವರೆಗೆ ಅವಕಾಶ ನೀಡಿತ್ತು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅವಧಿ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ನಗರ ವಿಶ್ವವಿದ್ಯಾಲಯ ಪ್ರಕಟಣೆ ಹೊರಡಿಸಿದೆ.

Exit mobile version