Site icon PowerTV

ಬೆಳ್ಳಂ ಬೆಳಗ್ಗೆ ಬೆಂಗಳೂರಿನ ಹಲವೆಡೆ ಐಟಿ ಅಧಿಕಾರಿಗಳು ದಾಳಿ!

ಬೆಂಗಳೂರು : ಬೆಳ್ಳಂಬೆಳಗ್ಗೆ ಆದಾರ ತೆರಿಗೆ ಇಲಾಖೆ ಅಧಿಕಾರಿಗಳು ಏಕಕಾಲದಲ್ಲಿ 15ಕ್ಕೂ ಹೆಚ್ಚು ಸ್ಥಳಗಳಲ್ಲಿ ಮೆಗಾ ದಾಳಿ ಮಾಡಿದ್ದಾರೆ.

ನಗರದ ವಿಜಯನಗರ, ಹುಳಿಮಾವು, ಸದಾಶಿವನಗರ, ಬಿಟಿಎಂ ಲೇಔಟ್ ಸ್ಯಾಂಕಿ ಟ್ಯಾಂಕ್ ಸೇರಿದಂತೆ ಹಲವೆಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು ಮಹತ್ವದ ಮಾಹಿತಿ ಕಲೆಹಾಕುತ್ತಿದ್ದಾರೆ.

ಇದನ್ನೂ ಓದಿ: ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿ ಘೋಷಣೆ: ಪ್ರಶಸ್ತಿಯ ಮೊತ್ತ ಏರಿಕೆ

ಚೆನ್ನೈ ಮತ್ತು ದೆಹಲಿಯಿಂದ ರಾತ್ರೋರಾತ್ರಿ ಬೆಂಗಳೂರಿಗೆ ಆಗಮಿಸಿರೋ ಆದಾಯ ತೆರಿಗೆ ಅಧಿಕಾರಿಗಳು ಸರ್ಕಾರಕ್ಕೆ ನಿಡಬೇಕಾದ ತೆರಿಗೆಯನ್ನು ವಂಚನೆ ಮಾಡಿರುವ ಆರೋಪದ ಹಿನ್ನೆಲೆ ಹಲವೆಡೆ ಐಟಿ ಅಧಿಕಾರಿಗಳ  ದಾಳಿ ನಡೆಸಿದ್ದಾರೆ. ಇದೇ ವೇಳೆ ಚಿನ್ನದ ವ್ಯಾಪಾರಿಗಳ‌ ಮನೆ ಹಾಗೂ ಕಚೇರಿಗಳ ಮೇಲೂ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

Exit mobile version