Site icon PowerTV

ಮಹಡಿ ಮೇಲಿಂದ ಬಿದ್ದಿದ್ದ ಮಗು ಸಾವು!

ಆನೇಕಲ್​ : ಮಹಡಿಯ ಮೇಲಿಂದ ಬಿದ್ದು ಎರಡು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿಯ ಶಂಕರಪ್ಪ ಬಡಾವಣೆಯಲ್ಲಿ ನಡೆದಿದೆ.

ಗುಲ್ಬರ್ಗ ಮೂಲದ ಜಗದೀಶ್ ಹಾಗೂ ಪೂಜಾ ದಂಪತಿಯ ಪುತ್ರನಾಗಿದ್ದು, ಮನೆಯ ಮೊದಲನೇ ಮಹಡಿಯಲ್ಲಿ ಮಗು ಆಟವಾಡುತ್ತಿತ್ತು. ಆಯಾತಪ್ಪಿ ಮಹಡಿಯ ಮೇಲಿಂದ ಕೆಳಗೆ ಬಿದ್ದ ಮಗುವನ್ನ ಚಿಕಿತ್ಸೆಗಾಗಿ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಪುಟ್ಟ ಕಂದಮ್ಮ ಸಾವನ್ನಪ್ಪಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಶಾಲಾ ಸಮಯ ಬದಲಾವಣೆ?

ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಈ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Exit mobile version