Site icon PowerTV

ವಾಟಾಳ್​ ನೇತೃತ್ವದಲ್ಲಿ ಇಂದು KRS ಚಲೋ ಬೃಹತ್ ರ‍್ಯಾಲಿ!

ಬೆಂಗಳೂರು : ಕಾವೇರಿ ನದಿ ನೀರು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು KRS ಚಲೋ ಬೃಹತ್ ರ‍್ಯಾಲಿ ನಡೆಯಲಿದೆ.

ಇಂದು ಬೆಳಿಗ್ಗೆ 11ಗಂಟೆಗೆ ಬೆಂಗಳೂರು ಮೈಸೂರು ಬ್ಯಾಂಕ್ ವೃತ್ತದಿಂದ ಪ್ರಾರಂಭವಾಗುವ ರ‍್ಯಾಲಿ ಮಂಡ್ಯದ KRS ಡ್ಯಾಂವರೆಗೆ ನಡೆಯಲಿದೆ. ನೂರಾರು ಜನರು ರ‍್ಯಾಲಿಯಲ್ಲಿ ಭಾಗವಹಿಸಲಿದ್ದಾರೆ. ರ‍್ಯಾಲಿ ಬಳಿಕ KRS ಡ್ಯಾಂಗೆ ಮುತ್ತಿಗೆ ಹಾಕಲಾಗುವುದು ಎಂದು ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

ಇದನ್ನೂ ಓದಿ : ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಮೂವರು ಆರೋಪಿಗಳ ಜಾಮೀನು ಅರ್ಜಿ ವಜಾ!

ಇನ್ನು ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಅ.10ರಂದು ತಮಿಳುನಾಡು ಗಡಿ ಬಂದ್ ಮಾಡುವುದಾಗಿ ವಾಟಾಳ್ ನಾಗರಾಜ್ ಘೋಷಣೆ ಮಾಡಿದ್ದಾರೆ.

Exit mobile version