Site icon PowerTV

ಮಂಡ್ಯ ಜಿಲ್ಲೆ, ಕಾವೇರಿ ಅಚ್ಚುಕಟ್ಟಿಗೆ HDK ಕೊಡುಗೆ ಏನು?: ಸಚಿವ ಚೆಲುವರಾಯಸ್ವಾಮಿ ಪ್ರಶ್ನೆ!

ಮಂಡ್ಯ : ಮಂಡ್ಯ ಜಿಲ್ಲೆಯ ಕಾವೇರಿ ಅಚ್ಚುಕಟ್ಟಿಗೆ ಕುಮಾರಸ್ವಾಮಿ ಕೊಡುಗೆ ಏನು ಎಂದು ಮಾಜಿ ಸಿಎಂ ಹೆಚ್.​​ಡಿ. ಕುಮಾರಸ್ವಾಮಿ ಅವರನ್ನು ಸಚಿವ ಚಲುವರಾಯಸ್ವಾಮಿ ಪ್ರಶ್ನಿಸಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಕುಮಾರಸ್ವಾಮಿ ಸಾಧನೆ ಏನು ಅಂತಾ ನಮಗೂ ಗೊತ್ತಿದೆ. ವೋಟ್ ಹಾಕಿಸಿಕೊಳ್ಳಲು ಏನು ಮಾತಾಡ್ಬೇಕೋ ಅದನ್ನು ಮಾಡುತ್ತಾರೆ. ಅವರ ತಂದೆ ಕೊಡುಗೆಯನ್ನೇ ಎಷ್ಟುಸಲ ಹೇಳುತ್ತಾರೆ. ಅವರ ತಂದೆ ಕೊಡುಗೆ ಕೊಟ್ಟಾಯ್ತು, ಜನರು ಕೃತಜ್ಞತೆ ಸಲ್ಲಿಸಿದ್ದಾಯ್ತು. ಕುಮಾರಸ್ವಾಮಿಯವರ ವೈಯಕ್ತಿಕ ಕೊಡುಗೆ ಏನು. ಮಾಜಿ ಪ್ರಧಾನಿ ದೇವೇಗೌಡರ ಕೊಡುಗೆ ಮೇಲೆ ರಾಜಕಾರಣ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

JDS, BJP ಸಂಸದರು ಪ್ರಧಾನಿ ಬಳಿ ಹೋಗಿ ಕೇಳಲಿ :

ತಮಿಳುನಾಡಿಗೆ KRS ಜಲಾಶಯದಿಂದ ನೀರು ಹರಿಸುತ್ತಿರುವ ವಿಚಾರವಾಗಿ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದ ಜೆಡಿಎಸ್, ಬಿಜೆಪಿ ಸಂಸದರು ಪ್ರಧಾನಿ ಬಳಿ ಹೋಗಿ ಕೇಳಲಿ ಎಂದರು.

ಸಿಎಂ ಸಿದ್ದರಾಮಯ್ಯ ಬಳಿ ನಮ್ಮ ಶಾಸಕರು ಬಂದು ಮಾತನಾಡಿದ ಹಾಗೆ ಪ್ರಧಾನಿ ಮೋದಿ ಜೊತೆ ಬಿಜೆಪಿ, ಜೆಡಿಎಸ್ ನಾಯಕರು ಮಾತನಾಡಲಿ. ಲೋಕಸಭಾ ಚುನಾವಣೆಯಲ್ಲಿ ಏನೋ ಸಾಧನೆ ಮಾಡುವುದಕ್ಕಾಗಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ ಎಂದು ಬಿಜೆಪಿ ಮತ್ತು ಜೆಡಿಎಸ್​ ವಿರುದ್ದ ವಾಗ್ದಾಳಿ ನಡೆಸಿದರು.

Exit mobile version