Site icon PowerTV

ದುಡುಕಿದ ದಂಪತಿ : ಒಂದೇ ವೇಲು ಬಿಗಿದುಕೊಂಡು ನೇಣಿಗೆ ಶರಣು, ಹೆಣ್ಣು ಮಗು ಅನಾಥ

ತುಮಕೂರು : ಒಂದೇ ವೇಲು ಬಿಗಿದುಕೊಂಡು ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ರೊಪ್ಪ ಗ್ರಾಮದಲ್ಲಿ ಘಟನೆ.

ಮನು (26) ಹಾಗೂ ಪವಿತ್ರ (24) ಮೃತ ದುರ್ದೈವಿ ದಂಪತಿ. ಮೂರು ವರ್ಷದ ಹಿಂದೆ ಇವರು ಮದುವೆಯಾಗಿದ್ದರು. ಇವರಿಗೆ ಎರಡು ವರ್ಷದ ಹೆಣ್ಣ ಮಗು ಇದೆ. ತಾವು ವಾಸವಿದ್ದ ರೊಪ್ಪ ಗ್ರಾಮದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಪವಿತ್ರ ಅವರ ವೇಲಿನಲ್ಲಿ ಇಬ್ಬರೂ ನೇಣು ಹಾಕಿಕೊಂಡ ರೀತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಇಂದು ಬೆಳಗ್ಗೆ ಮನೆಯ ಬಾಗಿಲು ತೆರೆಯದಿದ್ದಾಗ ಅಕ್ಕಪಕ್ಕದ ನಿವಾಸಿಗಳು ಅನುಮಾನಗೊಂಡು ಕಿಟಕಿಯಿಂದ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಬಳಿಕ, ಪಾವಗಡ ಪಟ್ಟಣ ಪೊಲೀಸರಿಗೆ ಮಾಹಿತಿ ತಿಳಿಸಿದ್ದು, ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೃತ ದಂಪತಿ ಟೊಮೊಟೊ ಸೇರಿದಂತೆ ವಿವಿಧ ಬೆಳೆ ಬೆಳದಿದ್ದರು. ಕೃಷಿಯಲ್ಲಿ ನಷ್ಟ ಉಂಟಾಗಿ, ಸಾಲದ ಹೊರೆ ಹೆಚ್ಚಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ಪಾವಗಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version