Site icon PowerTV

ಸಿದ್ದರಾಮಯ್ಯ ಮಹಿಳಾಪ್ರಿಯ ಮುಖ್ಯಮಂತ್ರಿ : ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು : ನಮ್ಮದು ಮಹಿಳಾಪ್ರಿಯ ಸರ್ಕಾರ. ಕಾಂಗ್ರೆಸ್ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ಕೊಡುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಮದ್ಯದಂಗಡಿಗಳಿಗೆ ಹೆಚ್ಚುವರಿ ಅನುಮತಿ ಕೊಡಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಹೆಚ್ಚು ಅನುಮತಿ ಕೊಡುವುದಕ್ಕೆ ನಮ್ಮ ವಿರೋಧ ಇದೆ ಎಂದು ತಿಳಿಸಿದ್ದಾರೆ.

ಮಹಿಳಾ ಸಬಲೀಕರಣಕ್ಕೆ ಇಷ್ಟೆಲ್ಲಾ ಒತ್ತು ಕೊಟ್ಟು, ಇದರ ಮಧ್ಯೆ ಜನಸಂಖ್ಯೆ ಆಧಾರಿತವಾಗಿ ಮದ್ಯದಂಗಡಿ ಹೆಚ್ಚಳಕ್ಕೆ ಸರ್ಕಾರದ ಭಾಗವಾದರೂ ನಾನು ವಿರೋಧ ಇದ್ದೇನೆ. ಮಹಿಳೆಯರು ಕೂಡ ಇದನ್ನು ಇಷ್ಟಪಡಲ್ಲ. ನಮ್ಮದು ಮಹಿಳಾಪ್ರಿಯ ಸರ್ಕಾರ. ಕಾಂಗ್ರೆಸ್ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ಕೊಡುತ್ತದೆ. ಇಂತಹ ನಿರ್ಧಾರಕ್ಕೆ ನಮ್ಮ ವಿರೋಧ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ಧಾರಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಬಾಯಿ ತೆಗೆದರೆ ರಾಮನ ಬಗ್ಗೆ ಮಾತಾಡ್ತಾರೆ

ರಾಹುಲ್ ಗಾಂಧಿಯವರನ್ನು ಬಿಜೆಪಿ ರಾವಣನಿಗೆ ಹೋಲಿಸಿರುವ ವಿಚಾರದ ಬಗ್ಗೆ ಮಾತನಾಡಿದ ಅವರು, ರಾವಣ, ಕೀಚಕ ಅನ್ನೋದು ಬಿಜೆಪಿಯವರ ಸಂಸ್ಕೃತಿಯನ್ನ ತೋರಿಸುತ್ತೆ. ಬಿಜೆಪಿಯವರು ರಾಮ ಅಂತಾರೆ, ಬಾಯಿ ತೆಗೆದರೆ ರಾಮನ ಬಗ್ಗೆ ಮಾತನಾಡ್ತಾರೆ. ರಾವಣನ ಕಾಯಕ ಮಾಡುತ್ತಾರೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು ನೀಡಿದ್ದಾರೆ.

Exit mobile version