Saturday, August 23, 2025
Google search engine
HomeUncategorizedಸನಾತನ ಧರ್ಮ ವಿರೋಧಿಸುವ ಮಟ್ಟಕ್ಕೆ ಕೈ ಹಾಕಬೇಡಿ, ಒಮ್ಮೆ ಕಿಡಿ ಹೊತ್ತಿದರೆ ಶಾಂತಿ ಬೇಗ ಸಿಗಲ್ಲ...

ಸನಾತನ ಧರ್ಮ ವಿರೋಧಿಸುವ ಮಟ್ಟಕ್ಕೆ ಕೈ ಹಾಕಬೇಡಿ, ಒಮ್ಮೆ ಕಿಡಿ ಹೊತ್ತಿದರೆ ಶಾಂತಿ ಬೇಗ ಸಿಗಲ್ಲ : ಪೇಜಾವರ ಶ್ರೀ

ಧಾರವಾಡ : ಸನಾತನ ಧರ್ಮವನ್ನು ವಿರೋಧಿಸುವ ಮಟ್ಟಕ್ಕೆ ಕೈ ಹಾಕಬಾರದು. ಒಮ್ಮೆ ಕಿಡಿ ಹೊತ್ತಿದರೆ ಶಾಂತಿ ಬೇಗ ಸಿಗುವುದಿಲ್ಲ. ಮಣಿಪುರವೇ ಇದಕ್ಕೆ ಉದಾಹರಣೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮ ಎಂದರೆ ಸಮಾಜವನ್ನು ನಿರಂತರ ಮುನ್ನಡೆಸುವ ಬದುಕಿನ ಸೂತ್ರ. ಎಲ್ಲರೂ ಸುಖ ಸಂತೋಷದಿಂದ ಇರಬೇಕು. ಅದಕ್ಕಾಗಿ ಅಳವಡಿಸಿಕೊಳ್ಳಬೇಕಾದ ನೀತಿ ನಿಯಮವೇ ಸನಾತನ ಧರ್ಮ ಎಂದು ಹೇಳಿದ್ದಾರೆ.

ನಮ್ಮ ಸಂತೋಷದ ಪ್ರಯತ್ನ ಮತ್ತೊಬ್ಬರ ದುಃಖಕ್ಕೆ ಕಾರಣವಾಗಬಾರದು. ನನ್ನ ಪ್ರಯತ್ನದಿಂದ ಅಕ್ಕಪಕ್ಕದವರಿಗೆ ದುಃಖ ಆಗಬಾರದು. ನನ್ನ ಪ್ರಯತ್ನದಿಂದ ನನ್ನ ಜೊತೆಗೆ ಅಕ್ಕಪಕ್ಕದವರಿಗೂ ಸುಖ ಸಿಗುವಂತಾಗಬೇಕು. ಮಳೆ ಬಂದಾಗ ಇಡೀ ಊರಿಗೆ ಬರುತ್ತದೆ. ಹೀಗಾಗಿ, ಮತ್ತೊಬ್ಬರಿಗೆ ದುಃಖ ಆಗದಂತೆ ಎಲ್ಲರಿಗೂ ಸುಖ ಸಿಗುವಂತೆ ನಮ್ಮ ಪ್ರಯತ್ನಗಳು ಇರಬೇಕು. ಆಗ ಮಾತ್ರ ಎಲ್ಲರೂ ನೆಮ್ಮದಿಯಿಂದ ಬದುಕಲು ಸಾಧ್ಯ. ಇದುವೆ ಸನಾತನ ಧರ್ಮಎಂದು ವಿಶ್ಲೇಷಿಸಿದ್ದಾರೆ.

ರಾಜಕಾರಣಿಗಳು ಒಂದು ಪಕ್ಷಕ್ಕೆ ಸಿಮೀತವಲ್ಲ

ಸನಾತನ ಧರ್ಮವನ್ನು ವಿರೋಧಿಸುವ ಮಟ್ಟಕ್ಕೆ ಕೈ ಹಾಕಬಾರದು. ಒಮ್ಮೆ ಕಿಡಿ ಹೊತ್ತಿದರೆ ಶಾಂತಿ ಬೇಗ ಸಿಗುವುದಿಲ್ಲ. ಮಣಿಪುರವೇ ಇದಕ್ಕೆ ಉದಾಹರಣೆ. ರಾಜಕಾರಣಿಗಳು ಒಂದು ಪಕ್ಷಕ್ಕೆ ಸಿಮೀತವಲ್ಲ. ಸಮಾಜದ ಎಲ್ಲರ ಸುಖ ಶಾಂತಿಗೆ ಬೇಕಾದ ಸೂತ್ರಗಳನ್ನು ಅಳವಡಿಸಿಕೊಳ್ಳಬೇಕು ಎಂದು ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸಲಹೆ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments