Site icon PowerTV

ಪಟಾಕಿ ದುರಂತ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮಕ್ಕೆ ಮಾಜಿ ಸಿಎಂ ಬೊಮ್ಮಾಯಿ ಆಗ್ರಹ!

ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತಕ್ಕೆ ಸ್ಥಳೀಯ‌ ಜಿಲ್ಲಾಡಳಿತದ ನಿರ್ಲಕ್ಷ್ಯ ಕಾರಣ. ಹಣಕಾಸು ವ್ಯವಹಾರ ಮಾಡಿಕೊಂಡು ಅಕ್ರಮವಾಗಿ ಲೈಸೆನ್ಸ್ ಕೊಡುವುದು, ಅಕ್ರಮ ಶೇಖರಣೆಗೆ ಅವಕಾಶ ಮಾಡಿಕೊಟ್ಟಿರುವುದರಿಂದ ಇಷ್ಟು ದೊಡ್ಡ ದುರಂತ ಆಗಿದೆ. ತಪ್ಪಿತಸ್ಥ ಅಧಿಕಾರಗಳ ಮೇಲೆ ಕ್ರಮ ಕೈಗೊಂಡರೆ ಅನಾಹುತಗಳು ತಪ್ಪಲಿವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪಟಾಕಿ ನಿರ್ವಹಣೆಯ ನಿಯಮಗಳ ಪಾಲನೆ ಆಗುತ್ತಿಲ್ಲ. ಅಧಿಕಾರಿಗಳು ನಿರ್ಲಕ್ಷ್ಯ ತಾಳಿದ್ದಾರೆ. ಇಷ್ಟು ದೊಡ್ಡ ದುರಂತ ಆಗಿದ್ದು, ಸರ್ಕಾರ ಕಣ್ತೆರೆಯದಿದ್ದರೆ ಇನ್ನಷ್ಟು ದುರಂತಗಳು ನಡೆಯಲಿವೆ ಎಂದರು.

ಇದನ್ನೂ ಓದಿ: ಪಟಾಕಿ ದುರಂತ: ಮೃತರ ಕುಟುಂಬಗಳಿಗೆ ಸರ್ಕಾರ ನೆರವಾಗುವಂತೆ ಹೆಚ್​​ಡಿಕೆ ಮನವಿ!

ಅತ್ತಿಬೆಲೆ ಪಟಾಕಿ ದುರಂತ ಬಹಳ ದೊಡ್ಡ ಘೋರ : 

ಪಟಾಕಿ ದುರಂತದಲ್ಲಿ 14 ಜನ ಮೃತಪಟ್ಟಿದ್ದಾರೆ, ಇದು ಆಘಾತಕಾರಿ ವಿಚಾರ ಸರ್ಕಾರ ಘೋಷಣೆ ಮಾಡಿರುವ ಪರಿಹಾರವನ್ನು ಶೀಘ್ರವೇ ಬಿಡುಗಡೆ ಮಾಡಲಿ, ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸಲಿ. ಹಾವೇರಿಯಲ್ಲೂ ಪಟಾಕಿ ದುರಂತ ಆಗಿತ್ತು ಕಾನೂನಿನಲ್ಲಿ ಪಟಾಕಿಗಳ ಇಷ್ಟೊಂದು ಪ್ರಮಾಣದ ಶೇಖರಣೆಗೆ ಅವಕಾಶ ಇಲ್ಲ. ಈ‌ ಒಂದೂವರೆ ತಿಂಗಳಲ್ಲಿ ಎರಡನೇ ಪಟಾಕಿ ದುರಂತ ನಡೆದಿದೆ. ಈ ಮೊದಲು ಹಾವೇರಿಯಲ್ಲಿ ದುರಂತ ನಡೆದು ನಾಲ್ಕು ಜನ ಮೃತಪಟ್ಟಿದ್ದರು.

ಈಗ ಅತ್ತಿಬೆಲೆಯಲ್ಲಿ 14 ಜನ ಮೃತಪಟ್ಟಿದ್ದಾರೆ ಅಂದರೆ, ನಿಯಮಗಳ ಪಾಲನೆ ಆಗುತ್ತಿಲ್ಲ ಅಂತ ಇದರಿಂದ ಗೊತ್ತಾಗುತ್ತದೆ. ಹಾವೇರಿ, ಅತ್ತಿಬೆಲೆ ದುರಂತಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ಮಾಡಲಿ ಮೊದಲು ತಪ್ಪು ಮಾಡಿರುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಂಡರೆ ಇಂಥ ಘಟನೆಗಳು ನಿಲ್ಲುತ್ತವೆ ಎಂದರು.

Exit mobile version