Wednesday, August 27, 2025
HomeUncategorizedಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ : 2,000ಕ್ಕೇರಿದ ಸಾವಿನ ಸಂಖ್ಯೆ

ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ : 2,000ಕ್ಕೇರಿದ ಸಾವಿನ ಸಂಖ್ಯೆ

ಬೆಂಗಳೂರು : ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದ ಸಾವನ್ನಪ್ಪಿದವರ ಸಂಖ್ಯೆ 2,000ಕ್ಕೆ ಏರಿಕೆಯಾಗಿದೆ ಎಂದು ಅಲ್ಲಿನ ಸರ್ಕಾರ ತಿಳಿಸಿದೆ.

ಭೂಕಂಪದಿಂದ ಸುಮಾರು 12 ಗ್ರಾಮಗಳು ನಾಶವಾಗಿವೆ. ಅಲ್ಲಿನ ಸಾವಿರಾರು ಮನೆಗಳು ನೆಲಸಮವಾಗಿವೆ. ನೂರಾರು ಜನ ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ. ಅವರ ರಕ್ಷಣೆಗೆ ಸತತ ಪ್ರಯತ್ನ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭೂಕಂಪದ ಕೇಂದ್ರ ಬಿಂದು ಹೆರಾತ್ ನಗರದ ವಾಯುವ್ಯಕ್ಕೆ ಸುಮಾರು 40 ಕಿಲೋಮೀಟರ್ ದೂರದಲ್ಲಿದೆ ಎಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ ಹೇಳಿದೆ. ನಗರದಲ್ಲಿ ಕನಿಷ್ಠ ಐದು ಪ್ರಬಲ ಕಂಪನಗಳು ಸಂಭವಿಸಿವೆ ಎಂದು ತಿಳಿದು ಬಂದಿದೆ. ಅಲ್ಲದೇ ಸಾವಿನ ಸಂಖ್ಯೆ ಕ್ಷಣ ಕ್ಷಣಕ್ಕೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಅಫ್ಘಾನಿಸ್ತಾನದಲ್ಲಿ ಸುಮಾರು 600 ಮನೆಗಳು ಸಂಪೂರ್ಣ ಹಾನಿಗೀಡಾಗಿವೆ. ಹೆರಾತ್ ಪ್ರಾಂತ್ಯವೊಂದರಲ್ಲೇ 12 ಗ್ರಾಮಗಳು ನಾಮಾವಶೇಷವಾಗಿವೆ. ಈ ಗ್ರಾಮಗಳಲ್ಲಿ ಇದ್ದ 4,200 ಮಂದಿ ನಿರಾಶ್ರಿತರಾಗಿದ್ದಾರೆ. ಮೊದಲ ಬಾರಿ ಭೂಕಂಪ ಸಂಭವಿಸಿದಾಗಲೇ ಬಹುತೇಕ ಮನೆಗಳು ಧರೆಗುರುಳಿವೆ ಎಂದು ಬಷೀರ್ ಅಹಮದ್ ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments