Site icon PowerTV

ಕುಕ್ಕೆ ಸುಬ್ರಹ್ಮಣ್ಯದಲ್ಲಿ ದೇವೇಗೌಡ ದಂಪತಿ ವಿಶೇಷ ಪೂಜೆ

ಬೆಂಗಳೂರು : ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ದಂಪತಿ ಇಂದು ಮುಂಜಾನೆ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಹೆಚ್.ಡಿ. ದೇವೇಗೌಡ ಹಾಗೂ ಪತ್ನಿ ಚನ್ನಮ್ಮ ಬೆಳ್ಳಂಬೆಳಗ್ಗೆ ಶ್ರೀ ಕ್ಷೇತ್ರ ಕುಕ್ಕೆಗೆ ಆಗಮಿಸಿ ವಿಶೇಷ ಪೂಜೆಗಳನ್ನು ಸಲ್ಲಿಸಿದ್ದಾರೆ.

ಹೆಚ್‌ಡಿಡಿ ದಂಪತಿ ಭಾನುವಾರ ಮಧ್ಯಾಹ್ನ ಹೆಲಿಕಾಪ್ಟರ್ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಬೇಕಿತ್ತು. ಆದರೆ, ಮೋಡ ಕವಿದ ವಾತಾವರಣವಿದ್ದ ಹಿನ್ನೆಲೆ ಹೆಲಿಕಾಪ್ಟರ್ ಟೇಕ್ ಆಫ್ ಆಗಲಿಲ್ಲ. ಬಳಿಕ ದಂಪತಿ ವಿಮಾನದ ಮೂಲಕ ಮಂಗಳೂರಿಗೆ ಬಂದು ತಡರಾತ್ರಿ ಸುಬ್ರಹ್ಮಣ್ಯಕ್ಕೆ ತೆರಳಿದ್ದಾರೆ.

ಇಂದು ಮುಂಜಾನೆ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇಂದು ಮಧ್ಯಾಹ್ನ ವೇಳೆಗೆ ಬೆಂಗಳೂರಿಗೆ ವಾಪಸ್​ ತೆರಳಲಿದ್ದಾರೆ.

Exit mobile version