ಡೆಂಗ್ಯೂ ನಿಯಂತ್ರಣಕ್ಕೆ ಪ್ರತಿ ವಾರ್ಡ್​ಗಳಲ್ಲಿಯೂ ಔಷಧಿ ಸಿಂಪಡಣೆ : ದಿನೇಶ್ ಗುಂಡೂರಾವ್

ಬೆಂಗಳೂರು : ಡೆಂಗ್ಯೂ ನಿಯಂತ್ರಿಸಲು ಪ್ರತಿ ವಾರ್ಡ್​ಗಳಲ್ಲಿಯೂ ಕಡ್ಡಾಯವಾಗಿ ಔಷಧಿ ಸಿಂಪಡಣೆ ಮಾಡಲು ಸೂಸನೆ ನೀಡಿದ್ದೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಆರೋಗ್ಯ ಜಾಗೃತಿ ಮತ್ತು ರೋಗಗಳು ಹರಡದಂತೆ ತಡೆಯಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ನಗರಾಭಿವೃದ್ಧಿ ಇಲಾಖೆ, ಬಿಬಿಎಂಪಿ  ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದ್ದಾರೆ.

ಸೊಳ್ಳೆ ನಿಯಂತ್ರಣ ಬಗ್ಗೆ ಅರಿವು ಮೂಡಿಸುವುದು ಸೇರಿದಂತೆ ಜನಸಾಮಾನ್ಯರ ಆರೋಗ್ಯ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದ್ದೇನೆ. ಸಾರ್ವಜನಿಕರ ಆರೋಗ್ಯ ರಕ್ಷಣೆಯು ಸರ್ಕಾರದ ಜವಾಬ್ದಾರಿಯಾಗಿದ್ದು ಈ ನಿಟ್ಟಿನಲ್ಲಿ ನಮ್ಮ ಆರೋಗ್ಯ ಇಲಾಖೆಯು ಸದಾ ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದ್ದಾರೆ.

ಈ ಸಭೆಯಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಆಯುಕ್ತರು,  ಬಿಬಿಎಂಪಿ ವಿಶೇಷ ಆಯುಕ್ತರು, ಆರೋಗ್ಯ  ಇಲಾಖೆ ಹಾಗೂ ಬಿಬಿಎಂಪಿಯ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

Related Articles

TRENDING ARTICLES