Site icon PowerTV

ಮತ್ತೆ 15 ದಿನ 3,000 ಕ್ಯೂಸೆಕ್ ನೀರು ಹರಿಸಲು CWMAಗೆ ಶಿಫಾರಸು

ನವದೆಹಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕುರಿತು ಇಂದು ದೆಹಲಿಯಲ್ಲಿ ನಡೆದ CWRC ಅಧ್ಯಕ್ಷ ವಿನೀತ್‌ ಗುಪ್ತಾ ನೇತೃತ್ವದಲ್ಲಿ ಸಭೆಯಲ್ಲಿ ಮತ್ತೆ ಕರ್ನಾಟಕಕ್ಕೆ ಭಾರಿ ಹಿನ್ನಡೆಯಾಗಿದೆ.

ಪ್ರತಿನಿತ್ಯ 3,000 ಕ್ಯೂಸೆಸ್ ನಂತೆ ಮುಂದಿನ 15 ದಿನಗಳ ಕಾಲ ಕಾವೇರಿ ನೀರು ಹರಿಸುವಂತೆ CWMAಗೆ CWRC ಶಿಫಾರಸು ಮಾಡಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುವುದರ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ಮಾಡಿರುವುದರ ಮಧ್ಯೆಯೇ ಕರ್ನಾಟಕ ಮತ್ತೆ ಸಂಕಷ್ಟಕ್ಕೆ ಸಿಲುಕಿದೆ.

ಸೆಪ್ಟಂಬರ್ 26ರಂದು ಕಾವೇರಿ ನದಿ ನೀರು ವಿವಾದ ಸಂಬಂಧ ನಡೆದಿದ್ದ ಸಭೆಯಲ್ಲಿ ಕಾವೇರಿ ನೀರು ನಿರ್ವಾಹಣಾ ಪ್ರಾಧಿಕಾರವು ನಿತ್ಯ 3,000 ಕ್ಯೂಸೆಸ್ ನಂತೆ ಮುಂದಿನ 18 ದಿನಗಳ ಕಾಲ ಕಾವೇರಿ ನೀರು ಹರಿಸುವಂತೆ ಶಿಫಾರಸು ಮಾಡಿತ್ತು.

ನಿತ್ಯ 3 ಸಾವಿರ ಕ್ಯೂಸೆಕ್​ ನೀರು

ಇನ್ನೂ ಆಗಸ್ಟ್ 28ರಂದು ನಡೆದಿದ್ದ ಕಾವೇರಿ ನೀರು ನಿರ್ವಾಹಣಾ ಪ್ರಾಧಿಕಾರದ ಸಭೆಯಲ್ಲಿ ದಿನಕ್ಕೆ 5,000 ಕ್ಯೂಸೆಸ್ ನಂತೆ 15 ದಿನಗಳ ಕಾಲ ಕಾವೇರಿ ನೀರು ಹರಿಸುವಂತೆ ಶಿಫಾರಸ್ಸು ನೀಡಲಾಗಿತ್ತು. ಇದೀಗ ಮತ್ತೆ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್​ ನೀರು ಬಿಡಬೇಕು ಎಂದು ಸೂಚಿಸಲಾಗಿದೆ.

Exit mobile version