Site icon PowerTV

ಭಾರತಕ್ಕೆ 273 ರನ್​ಗಳ ಸವಾಲಿನ ಗುರಿ ನೀಡಿದ ಅಫ್ಘಾನಿಸ್ತಾನ್

ನವದೆಹಲಿ : ವಿಶ್ವಕಪ್​-2023 ಟೂರ್ನಿಯ 9ನೇ ಪಂದ್ಯದಲ್ಲಿ ಭಾರತದ ವಿರುದ್ಧ ಅಫ್ಘಾನಿಸ್ತಾನ ತಂಡ ಸವಾಲಿನ ಟಾರ್ಗೆಟ್ ಕಲೆಹಾಕಿದೆ.

ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ನಿಗದಿತ 50 ಓವರ್​ಗಳಲ್ಲಿ 8 ವಿಕೆಟ್​ ಕಳೆದುಕೊಂಡು 272 ರನ್​ ಗಳಿಸಿತು.

ಅಫ್ಘಾನ್ ಪರ ನಾಯಕ ಹಶ್ಮತುಲ್ಲಾ ಶಾಹಿದಿ (80) ಹಾಗೂ ಅಜಮತುಲ್ಲಾ ಒಮರ್ಜಿ (62) ಅರ್ಧಶತಕ ಸಿಡಿಸಿ ಮಿಂಚಿದರು. ಇಬ್ರಾಹಿಂ 22, ಗುರ್ಬಾಜ್ 21, ಮೊಹಮ್ಮದ್ ನಬಿ 19, ರಷಿದ್ ಖಾನ್ 16 ರನ್​ ಗಳಿಸಿದರು. ಭಾರತದ ಪರ ಜಸ್ಪ್ರಿತ್ ಬುಮ್ರಾ 4 ವಿಕೆಟ್ ಪಡೆದು ಮಿಂಚಿದರು. ಬರ್ತ್​ಡೇ ಬಾಯ್ ಹಾರ್ದಿಕ್ ಪಾಂಡ್ಯ 2, ಶಾರ್ದೂಲ್ ಠಾಕೂರ್ ಹಾಗೂ ಕುಲದೀಪ್ ಯಾದವ್ ತಲಾ ಒಂದು ವಿಕೆಟ್ ಉರುಳಿಸಿದರು.

ಅಫ್ಘಾನಿಸ್ತಾನ್ ತಂಡ

ಹಶ್ಮತುಲ್ಲಾ ಶಾಹಿದಿ (ನಾಯಕ), ರಹಮಾನುಲ್ಲಾ ಗುರ್ಬಾಝ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ರಹಮತ್ ಷಾ, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಅಜ್ಮತುಲ್ಲಾ ಒಮರ್ಜಾಯ್, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ನವೀನ್-ಉಲ್-ಹಕ್, ಫರೂಲ್ಹಕ್ ಫಾರೂಖಿ

ಭಾರತ ತಂಡ

ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್

Exit mobile version