Site icon PowerTV

ಬಿಜೆಪಿ ಸೋಲಲು ಭೂಪೇಶ್ ಬಾಘೇಲ್ ಕಾರಣ : ತೇಜಸ್ವಿ ಸೂರ್ಯ

ಛತ್ತೀಸ್​ಗಢ : ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಲು ಛತ್ತೀಸ್​ಗಢದ ಮುಖ್ಯಮಂತ್ರಿ ಭೂಪೇಶ್​ ಬಾಘೇಲ್ ಕಾರಣ ಎಂದು ಸಂಸದ ತೇಜಸ್ವಿ ಸೂರ್ಯ ಗಂಭೀರ ಆರೋಪ ಮಾಡಿದ್ದಾರೆ.

ಛತ್ತೀಸ್​ಗಢದಲ್ಲಿ ಮಾತನಾಡಿರುವ ಅವರು, ಭೂಪೇಶ್​ ಬಾಘೇಲ್ ಅವರು ಇಲ್ಲಿ ಹಣವನ್ನು ಲೂಟಿ ಮಾಡಿ ಕರ್ನಾಟಕಕ್ಕೆ ಕಳುಹಿಸಿದರು. ಅದೇ ಕಾರಣದಿಂದ ಬಿಜೆಪಿಯು ಕರ್ನಾಟಕದಲ್ಲಿ ಸೋತಿದೆ ಎಂದಿದ್ದಾರೆ. ಈ ಬಾರಿ ಛತ್ತೀಸ್​ಗಢದ ಯುವ ಜನತೆ ಛತ್ತೀಸ್​ಗಢವನ್ನು ಭ್ರಷ್ಟಾಚಾರ, ವಂಶರಾಜಕಾರಣದಿಂದ ಮುಕ್ತಗೊಳಿಸಿ ಬಿಜೆಪಿಯನ್ನು ಸ್ಥಾಪಿಸಲು ಸಿದ್ಧವಾಗಿದ್ದಾರೆ ಎಂದು ಹೇಳಿದ್ದಾರೆ.

ಛತ್ತೀಸ್‌ಗಢ ರಾಜ್ಯ ವಿಧಾನಸಭಾ ಚುನಾವಣೆಗೆ ತಯಾರಿ ನಡೆಸುತ್ತಿದ್ದು, ನವೆಂಬರ್ 7 ಮತ್ತು 17ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ಡಿಸೆಂಬರ್ 3 ರಂದು ಫಲಿತಾಂಶ ಹೊರಬರಲಿದೆ. ಕಾಂಗ್ರೆಸ್ ಸರ್ಕಾರದ ನೀತಿಗಳಿಂದಾಗಿ ನೊಂದಿರುವ ರಾಜ್ಯದ ಯುವಜನರ ಪರವಾಗಿ ನ್ಯಾಯಕ್ಕಾಗಿ ಹೋರಾಡುವುದಾಗಿ ತೇಜಸ್ವಿ ಸೂರ್ಯ ಪ್ರತಿಜ್ಞೆ ಮಾಡಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Exit mobile version