Site icon PowerTV

ರಾಕ್ಷಸ ದಸರಾಗೆ ಸಿದ್ದರಾಮಯ್ಯ ಅವಕಾಶ ಕೊಟ್ಟಿದ್ದಾರೆ : ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು : ಸಿದ್ದರಾಮಯ್ಯ ಸರ್ಕಾರ ಯಾವ್ಯಾವ ದಸರಾಗೆ ಅವಕಾಶ ಕೊಟ್ಟಿದೆ ಗೊತ್ತಿಲ್ಲ. ರಾಕ್ಷಸ ದಸರಾಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಕಾಂಗ್ರೆಸ್​ನವರು ನ್ಯಾಯಯುತ, ಧರ್ಮದ ವ್ಯವಸ್ಥೆ ಹಾಳು ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಿಡಿಕಾರಿದರು.

ಮಹಿಷ ದಸರ ಆಚರಣೆಗೆ ಅವಕಾಶ ನೀಡಿರುವ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡಿ ದಸರಾ ಹೆಮ್ಮೆಯ ವಿಚಾರ. ಅದಕ್ಕೆ ಅವಕಾಶ ಮಡಿಕೊಡಬೇಕು. ಅದ್ಯಾವುದೋ ಬೇರೆ ದಸರಾ ಮಾಡ್ತೀನಿ ಅಂತ ಹೊರಟಿದ್ದಾರೆ. ಇದು ಬೇಸರದ ಸಂಗತಿ ಎಂದರು.

ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಮಾಡಿರೋ ಅನಾಹುತ ನೋಡಿದ್ರೆ. ಸಂಪೂರ್ಣ ರೈತ ವಿರೋಧಿ ನಿಲುವನ್ನ ತೆಗೆದುಕೊಂಡಿದೆ. ಏಳು ಗಂಟೆ ಕೊಡಬೇಕಿದ್ದ ವಿದ್ಯುತ್ ಎರಡು ಗಂಟೆಗೆ ಇಳಿಸಿದ್ದಾರೆ. ಬಿತ್ತನೆ ಬೀಜ ಹಾಳಾಗಿದೆ, ಗೊಬ್ಬರ ಸಮಸ್ಯೆ ಇದೆ. ಇದರ ನಡುವೆ ಲೋಡ್ ಶೆಡ್ಡಿಂಗ್ ನಿಂದ ಬೆಳೆ ಉಳಿಸಿಕೊಳ್ಳಲು ಆಗಿಲ್ಲ. ವಿದ್ಯುತ್ ಖರೀದಿ ಏನು ಬೇಕಾದ್ರೂ ಮಾಡಿ. ರೈತರ ಬಾಳಲ್ಲಿ ಚಲ್ಲಾಟ ಆಡೋದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು.

ರೈತರ ಆತ್ಮಹತ್ಯಗೆ ಸಿಎಂಡಿಸಿಎಂ ಕಾರಣ

ಕೃಷಿ ಸಚಿವ ಚಲುವರಾಯಸ್ವಾಮಿ ರೈತರಿಗೆ ಅನ್ಯಾಯ ಆಗಿದೆ ಅಂತ ಹೇಳ್ತಿದ್ದಾರೆ. ಇಂಧನ ಸಚಿವರು ಒಪ್ಪಿಕೊಳ್ತಿಲ್ಲ. ಇಲಾಖೆಯಲ್ಲಿ ಸಮನ್ವಯದ ಕೊರತೆ ಇದೆ. ಸಿದ್ದರಾಮಯ್ಯ, ಡಿಕೆಶಿ ಗಮನ ಹರಿಸದಿದ್ರೆ, ರೈತರಿಗೆ ಆಗೋ ಅನ್ಯಾಯಕ್ಕೆ, ಸಮಸ್ಯೆಗೆ, ಆತ್ಮಹತ್ಯೆಗೆ ಸಿಎಂ ಹಾಗೂ ಡಿಸಿಎಂ ನೇರ ಕಾರಣ. ರೈತರ ಸಮಸ್ಯೆ ಬಗೆಹರಿಸದಿದ್ರೆ ಬಿಜೆಪಿ ಮುಂದಿನ ದಿನದಲ್ಲಿ ಉಗ್ರ ಹೋರಾಟ ಮಾಡುತ್ತದೆ ಎಂದು ಎಚ್ಚರಿಕೆ ಸಂದೇಶ ರವಾನಿಸಿದರು.

Exit mobile version