Site icon PowerTV

ಪಟಾಕಿ ದುರಂತ : ಯುವಕನೋರ್ವ ಸಾವು, 16ಕ್ಕೆ ಏರಿದ ಮೃತರ ಸಂಖ್ಯೆ

ಬೆಂಗಳೂರು : ಅತ್ತಿಬೆಲೆ ಪಟಾಕಿ ಅಗ್ನಿ ದುರಂತದಲ್ಲಿ ಗಾಯಗೊಂಡಿದ್ದ ಯುವಕನೋರ್ವ ಮೃತಪಟ್ಟಿದ್ದಾನೆ. ಇದರೊಂದಿಗೆ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.

ಅಗ್ನಿ ದುರಂತದಲ್ಲಿ ಗಾಯಗೊಂಡಿದ್ದ ಬೊಮ್ಮನಹಳ್ಳಿಯ ಗಾರೇಬಾವಿಪಾಳ್ಯದ ನಿವಾಸಿ ವೆಂಕಟೇಶ್ ಅವರು ಇಂದು ಬೆಳಗ್ಗೆ ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಸ್ನೇಹಿತನ ಬರ್ತಡೇಗೆಂದು ಅತ್ತಿಬೆಲೆಯ ಬಾಲಾಜಿ ಟ್ರೇಡರ್ಸ್​ಗೆ ಪಟಾಕಿ ಖರೀದಿಸಲು ಹೋಗಿದ್ದರು. ಅದೇ ವೇಳೆಯೇ ಅಗ್ನಿ ದುರಂತ ಸಂಭವಿಸಿತ್ತು. ಈ ದುರ್ಘಟನೆಯಲ್ಲಿ ದಿನೇಶ್​​​ ಸಿಲುಕಿಕೊಂಡು ಗಂಭೀರವಾಗಿ ಗಾಯಗೊಂಡಿದ್ದರು. ಬೆಂಕಿ ಅವಘಡದಲ್ಲಿ 50ರಷ್ಟು ದೇಹ ಸುಟ್ಟಿತ್ತು. ಕೂಡಲೇ ಗಾಯಾಳು ದಿನೇಶ್​ನನ್ನು ಸೆಂಟ್ ಜಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ವೆಂಕಟೇಶ್ ಸಾವನ್ನಪ್ಪಿದ್ದಾನೆ.

Exit mobile version