Site icon PowerTV

ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಅನಿವಾರ್ಯ : ಡಿ.ಕೆ. ಶಿವಕುಮಾರ್

ಬೆಂಗಳೂರು : ಮಳೆ ಕೊರತೆಯಿಂದ ವಿದ್ಯುತ್‌ ಉತ್ಪಾದನೆ ಕುಂಠಿತವಾಗಿದೆ. ಹೀಗಾಗಿ ರಾಜ್ಯದಲ್ಲಿ ಲೋಡ್‌ಶೆಡ್ಡಿಂಗ್‌ ಅನಿವಾರ್ಯವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿರುವ ವಿದ್ಯುತ್‌ ಕೊರತೆಯನ್ನು ಒಪ್ಪಿಕೊಂಡಿದ್ದಾರೆ. ಅಗತ್ಯವಿರುವ ವಿದ್ಯುತ್‌ ಪೂರೈಕೆಗೆ ಕೇಂದ್ರಕ್ಕೆ ಮನವಿ ಮಾಡುತ್ತೇವೆ. ನಮ್ಮ ಇಂಧನ ಸಚಿವರು ಕೇಂದ್ರ ಸಚಿವರನ್ನು ಭೇಟಿ ಮಾಡುತ್ತಾರೆ. ರಾಜ್ಯದ ಪರಿಸ್ಥಿತಿಯನ್ನು ಕೇಂದ್ರಕ್ಕೆ ಮನವರಿಕೆ ಮಾಡಿಕೊಡುತ್ತೇವೆ ಎಂದರು.

ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್, ವಿದ್ಯುತ್ ಅಭಾವ ಹಿನ್ನೆಲೆ ನಿನ್ನೆಯೇ ಕೇಂದ್ರ ಇಂಧನ ಸಚಿವರ ಭೇಟಿಗೆ ಸಚಿವ ಕೆ.ಜೆ ಜಾರ್ಜ್ ತೆರಳಿದ್ದಾರೆ. ಕೇಂದ್ರ ಸಚಿವರ ಜೊತೆ ಚರ್ಚಿಸಿ ಕೆ.ಜೆ ಜಾರ್ಜ್ ಶನಿವಾರ ವಾಪಸ್ ಆಗಲಿದ್ದಾರೆ. ವಿದ್ಯುತ್ ಬಿಕ್ಕಟ್ಟು ಬಗೆಹರಿಸಲು ರಾಜ್ಯ ಸರ್ಕಾರ ಕೇಂದ್ರದ ಮೊರೆ ಹೋಗಿದೆ.

.ಪ್ರದೇಶದಿಂದ ವಿದ್ಯುತ್ ಖರೀದಿ

ಈ ವರ್ಷ ಅಕ್ಟೋಬರ್ ತಿಂಗಳಿನವರೆಗೆ 15 ರಿಂದ 20 ಸಾವಿರ ಮೆಗಾವ್ಯಾಟ್ ವಿದ್ಯುತ್​​ಗೆ ಕೊರತೆಯಾಗಿದೆ. ವಿದ್ಯುತ್ ಪೂರೈಕೆಗಾಗಿ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿದೆ. ಉತ್ತರ ಪ್ರದೇಶದಿಂದ ವಿದ್ಯುತ್ ಖರೀದಿಗೆ ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ ಮಳೆ ಕೊರತೆಯಿಂದ ವಿದ್ಯುತ್​​ಗೆ ತೀವ್ರ ಅಭಾವ ಉಂಟಾಗಿದೆ.

Exit mobile version