Site icon PowerTV

ನಾಳೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ

ಬೆಂಗಳೂರು : ಕಾವೇರಿ ನೀರು ನಿರ್ವಹಣ ಪ್ರಾಧಿಕಾರದ ಸಭೆ ನಾಳೆ ನವದೆಹಲಿಯಲ್ಲಿ ಮಧ್ಯಾಹ್ನ 2 ಗಂಟೆಗೆ ನಿಗದಿಯಾಗಿದೆ.

ವರ್ಚುವಲ್ ಮೂಲಕ ನಡೆಯುವ ಈ ಸಭೆಯಲ್ಲಿ CWRC ನೀಡಿದ್ದ ಆದೇಶವನ್ನು ಪರಿಶೀಲಿಸಲಾಗುತ್ತದೆ. ಅಕ್ಟೋಬರ್ 16ರಿಂದ ಅಕ್ಟೋಬರ್ 31ರವರೆಗೆ ಪ್ರತಿನಿತ್ಯ 3,000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ CWRC ಆದೇಶಿಸಿತ್ತು.

ತಮಿಳುನಾಡಿಗೆ ನೀರು ಹರಿಸುವಂತೆ CWRC ಆದೇಶ ಹಿನ್ನೆಲೆ ಮಂಡ್ಯದಲ್ಲಿ ಕಾವೇರಿ ಹೋರಾಟ ಮುಂದುವರಿದಿದೆ. ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರು ಮೈಸೂರು ಹೆದ್ದಾರಿ ತಡೆದು ಆಕ್ರೋಶ ಹೊರಹಾಕಿದ್ದಾರೆ.

ಸರ್ಕಾರ ಖಾಲಿ ಬಿಂದಿಗೆ ಕೊಟ್ಟಿದೆ

ಖಾಲಿ ಬಿಂದಿಗೆಗಳನ್ನ ಪ್ರದರ್ಶಿಸಿ ರಾಜ್ಯ ಸರ್ಕಾರ, ಸಂಸದರ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ರಾಜ್ಯ ಸರ್ಕಾರ ಖಾಲಿ ಬಿಂದಿಗೆ ಕೊಟ್ಟಿದೆ ಎಂದು ಘೋಷಣೆ ಕೂಗುತ್ತಿದ್ದಾರೆ. ಹೋರಾಟಕ್ಕೆ ಕನ್ನಡಸೇನೆ ಕಾರ್ಯಕರ್ತರು ಸಾಥ್ ನೀಡಿದ್ದಾರೆ.

Exit mobile version