Site icon PowerTV

ಇಸ್ರೇಲ್​​​ನಿಂದ ದೆಹಲಿಗೆ ಬಂದಿಳಿದ​ 212 ಭಾರತೀಯರು

ದೆಹಲಿ: ಯುದ್ಧಪೀಡಿತ ಇಸ್ರೇಲ್‌ನಲ್ಲಿ ಸಿಲುಕಿದ್ದ ಭಾರತೀಯರನ್ನು ಕರೆ ತಂದ ಮೊದಲ ವಿಮಾನ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ.

ಆಪರೇಷನ್ ಅಜಯ್ ಹೆಸರಿನಲ್ಲಿ ಭಾರತ ಸರ್ಕಾರ ಯುದ್ಧ ಪೀಡಿತ ಇಸ್ರೇಲ್‌ನಲ್ಲಿ ಸಿಲುಕಿದ ಭಾರತೀಯರ ರಕ್ಷಣೆಗೆ ವಿಶೇಷ ವಿಮಾನ ಕಳುಹಿಸಿತ್ತು. ಅದರಂತೆ ಈಗ ಮೊದಲ ಬ್ಯಾಚ್‌ನಲ್ಲಿ ಏರ್ ಇಂಡಿಯಾ ವಿಮಾನದ ಮೂಲಕ 212 ಭಾರತೀಯರು ತಾಯ್ನಾಡಿಗೆ ಆಗಮಿಸಿದ್ದಾರೆ.

ಇದನ್ನೂ ಓದಿ: ಆರ್.ಟಿ ನಗರದಲ್ಲಿ ಐಟಿ ರೇಡ್​: ಬಾಕ್ಸ್​ಗಳಲ್ಲಿ ಇಟ್ಟಿದ್ದ ಕಂತೆ ಕಂತೆ ಹಣ ಪತ್ತೆ!

ಇಸ್ರೇಲ್‌ನ ಬೆನ್ ಗುರಿಯೊನ್ ವಿಮಾನ ನಿಲ್ದಾಣದಿಂದ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಭಾರತೀಯರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಆತ್ಮೀಯವಾಗಿ ಬರಮಾಡಿಕೊಂಡರು.

ಮೊದಲ ಬ್ಯಾಚ್‌ನಲ್ಲಿ ದೆಹಲಿಗೆ ಬಂದಿಳಿದ 212 ಭಾರತೀಯರಲ್ಲಿ ಐವರು ಕನ್ನಡಿಗರೂ ಇದ್ದಾರೆ. ವಿಜಯಪುರ ಜಿಲ್ಲೆಯ ಈರಣ್ಣ, ಪ್ರೀತಿ ರಾಜಮನ್ನಾರ್, ಅಶ್ವಿನಿ ಕೃಷ್ಣ, ಕಲ್ಪನಾ ಮತ್ತು ಜಯೇಶ್ ತಾಕರ್ಶಿ ಎಂಬುವವರು ಈಗ ತಾಯ್ನಾಡಿಗೆ ಆಗಮಿಸಿದ್ದಾರೆ.

Exit mobile version