Site icon PowerTV

ಕರ್ತವ್ಯ ಲೋಪ ಸಾಬೀತು ಹಿನ್ನಲೆ THO ಪುಷ್ಪಲತಾ ಅಮಾನತು

ಹಾಸನ : ಕರ್ತವ್ಯ ಲೋಪ ಸಾಬೀತು ಹಿನ್ನಲೆ THO ಅಮಾನತು ಆಗಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನಲ್ಲಿ ನಡೆದಿದೆ. ಆರೋಗ್ಯಾಧಿಕಾರಿ ಡಾ.ಎಲ್ ಪುಷ್ಪಲತಾ ಅಮಾನತಾದ ಅಧಿಕಾರಿ.

ಪುಷ್ಪಲತಾ ಅರಕಲಗೂಡು ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ರೋಗಿಗಳಿಗೆ ಚಿಕಿತ್ಸೆ ನೀಡಲು ವೈಫಲ್ಯ ಹಾಗೂ ಹಣ ಪಡೆದಿರುವ ಆರೋಪ ಹಿನ್ನೆಲೆ ಅಮಾನತು ಮಾಡಲಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ದೂರು ನೀಡಿದ ಹಿನ್ನೆಲೆ ದೂರಿನ್ವಯ DHO ತನಿಖೆ ನಡೆಸಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಡಿ. ರಂದೀಪ್  ಈ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಮಹಿಳಾ ವೈದ್ಯರು ರೋಗಿಗಳಿಗೆ ಸರಿಯಾದ ಚಿಕಿತ್ಸೆ ನೀಡದೆ ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆ ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಶಿಸ್ತು ಕ್ರಮ ಬಾಕಿ ಇರಿಸಿ ಸೇವೆಯಿಂದ ಅಮಾನತು ಮಾಡಲಾಗಿದೆ. ಪ್ರಾಧಿಕಾರದ ಪೂರ್ವಾನುಮತಿ ಪಡೆಯದೆ ಕೇಂದ್ರ ಸ್ಥಾನ ಬಿಟ್ಟು ಹೋಗುವಂತಿಲ್ಲ ಎಂದು ಆದೇಶ ಹೊರಡಿಸಿದ್ದಾರೆ.

Exit mobile version