Site icon PowerTV

ಡಿಕೆಶಿ ಜೈಲಿಗೆ ಕಳಿಸಲು ಬಿಜೆಪಿ ಜೊತೆ HDK ಒಪ್ಪಂದ: ಲಕ್ಷ್ಮಣ್ ಸವದಿ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಹಾರ್‌ ಜೈಲಿಗೆ ಹೋಗುವ ಕಾಲ ದೂರವಿಲ್ಲ ಎಂಬ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಬಹುಶಃ ಕುಮಾರಸ್ವಾಮಿ ಅವರು ಬಿಜೆಪಿ ರಾಷ್ಟ್ರೀಯ ನಾಯಕರ ಜೊತೆ ಇದೇ ವಿಚಾರಕ್ಕೆ ಒಪ್ಪಂದ ಮಾಡಿಕೊಂಡು ಬಂದಿರಬೇಕು ಎಂದು ಹೇಳಿದ್ದಾರೆ. ‌

ಬೆಂಗಳೂರಿನಲ್ಲಿ ಮಾತನಾಡಿದ ಅವರು ಬಹುಶಃ ಕುಮಾರಸ್ವಾಮಿ ಅವರು ಬಿಜೆಪಿ ರಾಷ್ಟ್ರೀಯ ನಾಯಕರ ಬಳಿ ಡಿ.ಕೆ.ಶಿವಕುಮಾರ್‌ ಅವರನ್ನು ಜೈಲಿಗೆ ಕಳುಹಿಸುವ ವಿಷಯವನ್ನೇ ಮಾತನಾಡಿಕೊಂಡು ಬಂದಿರಬೇಕು. ಹಾಗಾಗಿ ಈ ರೀತಿ ಹೇಳಿಕೆ ನೀಡಿದ್ದಾರೆ ಎಂದರು.

ಇದನ್ನೂ ಓದಿ: ಆರ್.ಟಿ ನಗರದಲ್ಲಿ ಐಟಿ ರೇಡ್​: ಬಾಕ್ಸ್​ಗಳಲ್ಲಿ ಇಟ್ಟಿದ್ದ ಕಂತೆ ಕಂತೆ ಹಣ ಪತ್ತೆ!

ಬಿಜೆಪಿ ಲೀಡರ್ ಲೆಸ್ ಪಾರ್ಟಿ ಆಗಿದೆ. ವಿಪಕ್ಷ ನಾಯಕರೂ ಇಲ್ಲ, ರಾಜ್ಯಾಧ್ಯಕ್ಷರು ಇಲ್ಲ. ಹಂಗಾಮಿ ಅಧ್ಯಕ್ಷರಿದ್ದಾರೆ. ಹಾಗಾಗಿ ಅಲ್ಲಿರೋರು ಕಾಂಗ್ರೆಸ್‌ಗೆ ಬರುತ್ತಿದ್ದಾರೆ. ಬಹುಶಃ ಲೋಕಸಭೆ ಚುನಾವಣೆ ದೃಷ್ಟಿಯಿಂದ ಬಿಜೆಪಿ- ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.

Exit mobile version