Site icon PowerTV

ಸಿದ್ದರಾಮಯ್ಯರ 6ನೇ ಭಾಗ್ಯ ‘ರೈತ ಆತ್ಮಹತ್ಯೆ’ : ಜಿ.ಟಿ. ದೇವೇಗೌಡ

ಧಾರವಾಡ : ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ಥಿತ್ವಕ್ಕೆ ಬಂದಾಗಿನಿಂದಲೂ ಜನರು ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ ಎಂದು ಸರ್ಕಾರದ ವಿರುದ್ದ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಕಿಡಿಕಾರಿದರು.

ಧಾರವಾಡದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಐದು ತಿಂಗಳಿನಲ್ಲಿ ರಾಜ್ಯ ಸರ್ಕಾರ ಆಡಳಿತದಲ್ಲಿ ವಿಫಲವಾಗಿದೆ. ಗ್ಯಾರಂಟಿ ಯೋಜನೆಗಳಿಗೆ ರಾಜ್ಯ ಸರ್ಕಾರ ಹಣ ವ್ಯಯಿಸಿ ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿದೆ. ತೀವ್ರ ಬರಗಾಲದಿಂದ ರೈತರು ರೋಸಿ ಹೋಗಿದ್ದಾರೆ. ವಿದ್ಯುತ್ ಇಲ್ಲದೇ ಬೆಳೆ ಹಾನಿ ಆಗಿದೆ ಎಂದು ಕುಟುಕಿದರು.

ಹಣ ಕೊಟ್ಟು ವಿದ್ಯುತ್ ಖರೀದಿ ಮಾಡೋದು ಬಿಟ್ಟು, ಪ್ರತಿಯೊಂದು ವಿಷಯದಲ್ಲೂ‌ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರ ಬೊಟ್ಟು ಮಾಡುತ್ತಿದೆ. ರೈತ ವಿರೋಧಿ, ಜನ ವಿರೋಧಿ‌ ಆಡಳಿತವನ್ನು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ನೀಡುತ್ತಿದೆ. ಸರ್ಕಾರದ 6ನೇ ಭಾಗ್ಯ, ರೈತ ಆತ್ಮಹತ್ಯೆ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಜಿ.ಟಿ. ದೇವೇಗೌಡ ವಾಗ್ದಾಳಿ ನಡೆಸಿದರು.

Exit mobile version