Site icon PowerTV

ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದಿಸಿಲ್ಲ, ಕಣ್ಣು ತೆರೆದಿಲ್ಲ : ಜಯಮೃತ್ಯುಂಜಯ ಸ್ವಾಮೀಜಿ

ಹುಬ್ಬಳ್ಳಿ : ಪಂಚಮಸಾಲಿ ಸಮಾಜಕ್ಕೆ ಆದಷ್ಟು ಬೇಗ 2A ಮೀಸಲಾತಿ ಕೊಡಬೇಕು. ರಾಜ್ಯ ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದಿಸಿಲ್ಲ, ಕಣ್ಣು ತೆರೆದಿಲ್ಲ, ಸೌಜನ್ಯಕ್ಕೂ ನಮ್ಮನ್ನು ಕರೆದು ಮಾತಾಡಿಲ್ಲ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಸಮಾಜ ಈ ಬಾರಿ ಕಾಂಗ್ರೆಸ್ ಬೆನ್ನಿಗೆ ನಿಂತಿದೆ ಅನ್ನೋದನ್ನು ತಿಳ್ಕೋಬೇಕು. ಲಿಂಗಾಯತ ಪಂಚಮಸಾಲಿ ವಿಚಾರದಲ್ಲಿ ಯಾವ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು. ದುಷ್ಟ ಮನಸ್ಸುಗಳು ನಮಗೆ ಮೀಸಲಾತಿ ಸಿಗದಂತೆ ತಡೆ ಹಿಡಿದಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮೇಲೆ ವಿಶ್ವಾಸವಿದೆ. ಲೋಕಸಭಾ ಚುನಾವಣೆಯೊಳಗೆ ಮೀಸಲಾತಿ ಕೊಟ್ಟು ಸಮಾಜದ ಋಣ ತೀರಿಸುತ್ತಾರೆ ಎನ್ನುವ ವಿಶ್ವಾಸವಿದೆ. ಸಮಾಜಕ್ಕೆ ಯಾರು ಮೀಸಲಾತಿ ಕೊಡುತ್ತಾರೆ ಅವರನ್ನು ಗೆಲ್ಲಿಸುತ್ತೇವೆ. ಕೊಡದೆ ಇರುವವರ ವಿರುದ್ಧ ಅಸಮಾಧಾನ ಗೊಳ್ಳುವುದು ನಮ್ಮ ಸಮಾಜಕ್ಕೆ ಗೊತ್ತು ಎಂದು ಶ್ರೀಗಳು ಎಚ್ಚರಿಕೆ ನೀಡಿದ್ದಾರೆ.

Exit mobile version