Site icon PowerTV

ರೈತರಿಗೆ ಪ್ರತಿದಿನ 3 ಪಾಳಿಗಳಲ್ಲಿ ವಿದ್ಯುತ್: ಸಿಎಂ

ಬೆಂಗಳೂರು: ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಇಂಧನ ಇಲಾಖೆ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಪ್ರಗತಿ ಪರಿಶೀಲನಾ ಸಭೆ ಮಾಡಿ ರೈತರಿಗೆ ನಿತ್ಯ ಮೂರುಪಾಳಿಯಲ್ಲಿ5 ಗಂಟೆಗಳ ವಿದ್ಯುತ್ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಟ್ವೀಟ್​ ಮಾಡಿದ್ದಾರೆ. ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ವಿದ್ಯುತ್‌ ಬೇಡಿಕೆ ಗಣನೀಯವಾಗಿ ಹೆಚ್ಚಿರುವುದರಿಂದ ರೈತರಿಗೆ ಪ್ರತಿದಿನ ಮೂರು ಪಾಳಿಗಳಲ್ಲಿ ನಿರಂತರ ಐದು ಗಂಟೆಗಳ ಕಾಲ ವಿದ್ಯುತ್‌ ಪೂರೈಕೆ ಮಾಡುವಂತೆ ಹಾಗೂ ಲೋಡ್‌ ಶೆಡ್ಡಿಂಗ್‌ ಆಗದಂತೆ ಎಚ್ಚರಿಕೆ ವಹಿಸುವಂತೆ ಎಸ್ಕಾಂ ಎಂ.ಡಿ.ಗಳಿಗೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಶ್ರೀರಂಗಪಟ್ಟಣಕ್ಕೆ ತೆರಳಿದ್ದ ದಂಪತಿ ಅಪಘಾತದಲ್ಲಿ ದುರ್ಮರಣ!

ನವೆಂಬರ್​ನಲ್ಲಿ ಉತ್ತರಪ್ರದೇಶದಲ್ಲಿ 300 ಮೆಗಾವ್ಯಾಟ್, ಪಂಜಾಬ್​ನಿಂದ 600 ಮೆಗಾವ್ಯಾಟ್​ ವಿದ್ಯುತ್ ಪಡೆಯಲಾಗುವುದು. KERC ಅನುಮೋದನೆಯೊಂದಿಗೆ 1500 ಮೆಗಾವ್ಯಾಟ್ ಖರೀದಿಗೆ ಸಜ್ಜಾಗಿದ್ದು, ಆ ಮೂಲಕ ರಾಜ್ಯದಲ್ಲಿ ವಿದ್ಯುತ್ ಕೊರತೆ ನಿವಾರಿಸುವುದಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

 

Exit mobile version